ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟ ಘಟನೆ ನಡೆದಿದೆ.
ಇದನ್ನು ಓದಿ : Special news : ರಾತ್ರಿ ಮಲಗುವ ಮುನ್ನ ಒಂದು ಎಸಳು ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?
ಸಾವನ್ನಪ್ಪಿದ ಯುವಕರು ರೋಹಿತ್ (22), ಸುಚಿತ್ (22) ಮತ್ತು ಹರ್ಷ (22) ಎಂದು ತಿಳಿದು ಬಂದಿದೆ.
ಮೂವರು ಜಿಕೆವಿಕೆ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ : ಯೂಟ್ಯೂಬ್ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?
ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ.
ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.