ಜನಸ್ಪಂದನ ನ್ಯೂಸ್, ಬೆಂಗಳೂರು : ದಿನೇ ದಿನೇ ಹಿಟ್ ಆ್ಯಂಡ್ ರನ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆಯೇ ಮತ್ತೊಂದು ಅಂತಹದೆ ಪ್ರಕರಣ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರೊಂದು ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇದಾಗಿದೆ. ಈ ಘಟನೆ ನಡೆದ ಕೆಲ ಗಂಟೆಗಳಲ್ಲಿ ಫಾರ್ಚೂನರ್ ಕಾರು, ಬೈಕ್ ಸವಾರನಿಗೆ ಗುದ್ದಿ ಎಸ್ಕೇಪ್ ಆಗಿದೆ.
ರಾತ್ರಿ ವೇಳೆ ಮೃತ ಬಾಲಕ ರಸ್ತೆಯನ್ನು ದಾಟುತ್ತಿದ್ದ ವೇಳೆ ಯಮ ಸ್ಪೀಡ್ನಲ್ಲಿ ಬಂದ ಕೆಂಪು ಬಣ್ಣದ ಕಾರು ಡಿಕ್ಕಿ ಹೊಡೆದಿದೆ. ಸದ್ಯ ಈ ಹಿಟ್ ಆಯಂಡ್ ರನ್ ದೃಶ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ 5 ಅಡಿಗಿಂತ ಎತ್ತರಕ್ಕೆ ಹಾರಿ ನೆಲಕ್ಕೆ ಅಪ್ಪಳಿಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾನವೀಯತೆ ದೃಷ್ಟಿಯಿಂದ ಕಾರು ನಿಲ್ಲಿಸಬೇಕಿದ್ದ ಡ್ರೈವರ್ ಹಾಗೇ ಹೊರಟು ಹೋಗಿದ್ದಾನೆ.
ಈ ಸಂಬಂಧ ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.