Saturday, July 27, 2024
spot_img
spot_img
spot_img
spot_img
spot_img
spot_img

ರಾಜ್ಯದ ಉತ್ತರ ಒಳನಾಡಿನಲ್ಲಿ Heat wave ಎಚ್ಚರಿಕೆ ; ಮನೆಯಿಂದ ಹೊರಗೆ ಬರುವ ಮುನ್ನ ಎಚ್ಚರಿಕೆ.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎಲ್​ ನಿನೋ ಪ್ರಭಾವ ದುರ್ಬಲಗೊಳ್ಳದ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಬಿಸಿ ಗಾಳಿ (Heat wave) ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲಿ ಹೀಟ್ ವೇವ್ ಕಾರಣದಿಂದ ತಾಪಮಾನ ಕೂಡ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Health : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಮಾರ್ಚ್ ತಿಂಗಳಿನಲ್ಲಿ ಬಾಗಲಕೋಟೆ, ತುಮಕೂರಿನಲ್ಲಿ 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಇದು ವಾಡಿಕೆಗಿಂತ 4.5 ಡಿಗ್ರಿ ಹೆಚ್ಚಾಗಿದೆ. ಮಂಡ್ಯ, ಕೊಪ್ಪಳ, ಕಲಬುರಗಿ, ಗದಗ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಉಡುಪಿ, ಹಾವೇರಿಯಲ್ಲಿಯೂ 2 ಡಿಗ್ರಿ ತಾಪಮಾನ ಹೆಚ್ಚಾಗಿ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ ಹಾಗೂ ಹಾಸನ ಜಿಲ್ಲೆಗಳಲ್ಲಿ ಸರಿಸುಮಾರು 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ವಾಡಿಕೆಗಿಂತ 1.8 ಡಿಗ್ರಿ ಸೆಲ್ಸಿಯಸ್​ ಅಧಿಕ ಉಷ್ಣಾಂಶ ಇದಾಗಿದೆ.

ಬ್ಯಾಂಕ್‌ ಆಫ್‌ ಇಂಡಿಯಾ (BOI) ದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸದ್ಯ ಪೆಸಿಫಿಕ್ ಸಮುದ್ರದ ಪೂರ್ವ ಭಾಗದಲ್ಲಿ ಸಮುದ್ರದ ನೀರಿನ ಉಷ್ಣಾಂಶ ಜಾಸ್ತಿಯಾಗಿದೆ. ಮೇ ಅಥವಾ ಜೂನ್​ನಲ್ಲಿ ಎಲ್​ನಿನೋ ಸಂಪೂರ್ಣ ಪ್ರಭಾವ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಎ.ಪ್ರಸಾದ್​ ತಿಳಿಸಿದ್ದಾರೆ. (ಎಜೇನ್ಸಿಸ್)

spot_img
spot_img
- Advertisment -spot_img