Sunday, September 8, 2024
spot_img
spot_img
spot_img
spot_img
spot_img
spot_img
spot_img

Karnataka weather : ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿದೆ ಗೋತ್ತೇ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ಇಂದು (ದಿ.10) ಬುಧವಾರದಂದು ಮಲೆನಾಡು ಹಾಗು ಉತ್ತರ ಒಳನಾಡಿನ ವಿವಿಧೆಡೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಶುಷ್ಕ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಹಾವೇರಿ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಶುಷ್ಕ ವಾತಾವರಣವೇ ಇರಲಿದೆ.

ಇದನ್ನೂ ಓದಿ : Health : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

ದಕ್ಷಿಣ ಒಳನಾಡಿನ ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಶುಷ್ಕ ಹವಾಮಾನ ಇರಲಿದೆ.

ಹೀಟ್‌ ವೇವ್‌ ಅಲರ್ಟ್‌ :

ಉತ್ತರ ಒಳನಾಡಿನ ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಮಲೆನಾಡಿನ ಹಾಸನ ಹಾಗೂ ದಕ್ಷಿಣ ಒಳನಾಡಿನ ಕೋಲಾರ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.

ಇದನ್ನೂ ಓದಿ : ಇಂಥಾ ವ್ಯಕ್ತಿಗಳ ಪ್ರೀತಿಯಲ್ಲಿ ಹುಡ್ಗೀರು ಮೊದಲ ನೋಟದಲ್ಲೇ ಬೀಳ್ತಾರೆ ; ಯಾವ ಗುಣ ಅವರನ್ನು ಆಕರ್ಷಿಸುತ್ತೆ ಗೊತ್ತಾ.?

ತಾಪಮಾನ ಮುನ್ಸೂಚನೆ :

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ ಮತ್ತು ಕೋಲಾರದಲ್ಲೂ ತಾಪಮಾನ ಏರಿಕೆ ಆಗಲಿದೆ.

ಯೆಲ್ಲೋ ಅಲರ್ಟ್‌ :

ಮುಂದಿನ 2 ದಿನಗಳು ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. (ಎಜೇನ್ಸಿಸ್)

ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img