Wednesday, November 6, 2024
spot_img

Belagavi : ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ.?

ಜನಸ್ಪಂದನ ನ್ಯೂಸ್, ಬೆಳಗಾವಿ : ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಬೆಳಗಾವಿ ಜಿಲ್ಲೆಯ ಹೆಸರಾಂತ ಶಕ್ತಿ ದೇವಿಯ ಕ್ಷೇತ್ರದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.

ಇದನ್ನು ಓದಿ : ನೀವು BSNL ಸಿಮ್ ಬಳಕೆ ಮಾಡ್ತೀರಾ.? ಹಾಗಿದ್ರೆ ನಿಮಗೊಂದು ಸಿಹಿಸುದ್ದಿ.!

ಸವದತ್ತಿ ಯಲ್ಲಮ್ಮ ಗುಡ್ಡದ ಯಲ್ಲಮ್ಮ ಕರ್ನಾಟಕವಲ್ಲದೆ ಇಡೀ ದಕ್ಷಿಣ ಭಾರತದ ಭಕ್ತರು ಆಗಮಿಸುವ ಸುಕ್ಷೇತ್ರ ಎನಿಸಿದೆ.

ಈ ಸಲ ಭಕ್ತರಿಂದ ₹ 1.96 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಏಪ್ರಿಲ್ 1 ರಿಂದ ಮೇ 20 ರ ಅವಧಿಯಲ್ಲಿ ಭಕ್ತರು ಹಾಕಿದ ಕಾಣಿಕೆ ಇದಾಗಿದೆ. 1.71 ಕೋಟಿ ನಗದು, 20.44 ಲಕ್ಷ ಮೌಲ್ಯದ ಚಿನ್ನಾಭರಣ, 4.44 ಲಕ್ಷ ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.

ಇದನ್ನು ಓದಿ : ಖಾಸಗಿ video ವೈರಲ್ ಮಾಡುವ ಬೆದರಿಕೆ ; ನಕಲಿ ಪೊಲೀಸಪ್ಪನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ.!

ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರು ಪ್ರತಿಸಲದಂತೆ ಈ ಸಲವು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಕೋರಿ ದೇವಿಗೆ ಕಾಣಿಕೆ ಸಮರ್ಪಿಸಿದ್ದಾರೆ.

ಪ್ರತಿವರ್ಷ ಈ ಅವಧಿಯಲ್ಲಿ ಒಂದು ಕೋಟಿಯಿಂದ ಒಂದೂವರೆ ಕೋಟಿ ಕಾಣಿಕೆ ಸಂಗ್ರಹವಾಗುತ್ತಿತ್ತು.

ಆದರೆ ಇದೀಗ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಪರಿಣಾಮವಾಗಿ ಮಹಿಳಾ ಭಕ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿ ದೇವಿ ದರ್ಶನ ಪಡೆಯುವ ಜೊತೆಗೆ ಕಾಣಿಕೆ ಹಾಕುತ್ತಿದ್ದಾರೆ.

ಇದನ್ನು ಓದಿ : 10/12 ನೇ ತರಗತಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ.!

ಈ ಹಿನ್ನೆಲೆಯಲ್ಲಿ ಈ ಸಲವು ಹೆಚ್ಚಿನ ಕಾಣಿಕೆ ಸಂಗ್ರಹವಾಗಿರುವುದು ವಿಶೇಷವಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img