Saturday, July 27, 2024
spot_img
spot_img
spot_img
spot_img
spot_img
spot_img

ಕ್ರಿಮಿನಲ್‌ಗಳಿಗೆ ಮಾಹಿತಿ ಸೋರಿಕೆ ; ಐವರು ಪೊಲೀಸ್ ಸಿಬ್ಬಂದಿಗಳು suspend.!

spot_img

ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಎಸ್‌ಪಿ ಅಶೋಕ್‌ ಕೆ.ವಿ ಅವರು ಭ್ರಷ್ಟ ಪೊಲೀಸ್ ಸಿಬ್ಬಂದಿಗಳ (corrupt police personnel) ಪಾಲಿಗೆ ಸಿಂಹಸ್ವಪ್ನವಾಗಿದ್ದಾರೆ.

ಕ್ರಿಮಿನಲ್‌ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಒಂದೇ ದಿನ ಐವರು ಸಿಬ್ಬಂದಿಯನ್ನು ಅಮಾನತು ಮಾಡಿ (Suspension Order) ಎಸ್‌ಪಿ ಅಶೋಕ್‌ ಕೆ.ವಿ ಆದೇಶಿಸಿದ್ದಾರೆ.

ಇದನ್ನು ಓದಿ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

ಕ್ಯಾತಸಂದ್ರ ಠಾಣೆಯ ಸಿಬ್ಬಂದಿ‌ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಸಿಬ್ಬಂದಿ ಮನು ಎಸ್.ಗೌಡ, ಟ್ರಾಫಿಕ್ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್‌ಪಿ ಕಚೇರಿಯ ಸುರೇಶ್ ಸಸ್ಪೆಂಡ್ ಆಗಿದ್ದಾರೆ.

ಕ್ಯಾತಸಂದ್ರ ಪೊಲೀಸ್ ಠಾಣೆಯ ಇಬ್ಬರು, ಜಯನಗರ ಠಾಣೆಯ ಓರ್ವ, ಟ್ರಾಫಿಕ್ ಠಾಣೆಯ ಕಾನ್‌ಸ್ಟೇಬಲ್, ಎಸ್‌ಪಿ ಕಚೇರಿಯ ಓರ್ವ ಸಿಬ್ಬಂದಿ ಸಹ ಅಮಾನತಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೂವರು ಆರೋಪಿಗಳ‌ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹ ಮೂರ್ತಿಗೆ ಈ ಐವರು ಮಾಹಿತಿ ಸೋರಿಕೆ ಮಾಡುತ್ತಿದ್ದರು. ಈ ಆರೋಪಿಗಳಿಗೆ ಠಾಣೆಯ ಪ್ರಕರಣಗಳ‌ ಬಗ್ಗೆ ಮಾಹಿತಿ ನೀಡುತ್ತಿದ್ದರು.

ಇದನ್ನು ಓದಿ : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್‌, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವಣೆ.!

ಮೂವರ ವಿರುದ್ಧ ಕೊಲೆಗೆ ಸಂಚು, ಹಲ್ಲೆ ಆರೋಪದ ಮೇಲೆ‌ ಕೇಸ್ ದಾಖಲಾಗಿತ್ತು. ವಾಟ್ಸ್ ಆಯಪ್ ಮೂಲಕ ಆರೋಪಿಗಳಿಗೆ ಮಾಹಿತಿಯನ್ನು ರವಾನಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ ಪ್ರಕರಣವೊಂದರಲ್ಲಿ ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

spot_img
spot_img
- Advertisment -spot_img