Wednesday, May 22, 2024
spot_img
spot_img
spot_img
spot_img
spot_img
spot_img

ರೆಡ್ ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದ Inspector.!

spot_img

ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್‌.ಪುರ ಹೋಬಳಿಯ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ (Lokayukta officer’s) ಬಲೆಗೆ ಬಿದ್ದ ಘಟನೆ ನಡೆದಿದೆ.

ಇದನ್ನು ಓದಿ : ಬಸ್ಸಿನಲ್ಲೇ ರೊಮ್ಯಾನ್ಸ್ : ಮೂರು ಬಿಟ್ಟೋರು ಇವರು, ಛೀ ಅಸಹ್ಯ ಎಂದ ನೆಟ್ಟಿಗರು ; video viral.!

ರೆವಿನ್ಯೂ ಇನ್ಸ್‌ಪೆಕ್ಟರ್ ನರಸಿಂಹಮೂರ್ತಿ ಅವರು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಿ.ಎಸ್‌.ಪುರ ಹೋಬಳಿ ಗದ್ದೆಹಳ್ಳಿ ಗ್ರಾಮದ ನಾಗರಾಜು ಎಂಬುವವರಿಗೆ ಖಾತೆ ಬದಲಾವಣೆ ಮಾಡಿಕೊಡಲು ₹10 ಸಾವಿರ ಲಂಚಕ್ಕೆ ಬೇಡಿಕೆ (demand) ಇಟ್ಟಿದ್ದರು ಎನ್ನಲಾಗಿದೆ. ಹಣ ನೀಡಲು ಒಪ್ಪದ ರೈತ ನಾಗರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರು.

ಬುಧವಾರ ಸಿ.ಎಸ್‌.ಪುರ ನಾಡ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಹಣದ ಸಮೇತ (With money) ಕಂದಾಯ ತನಿಖಾಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ ವ್ಯಕ್ತಿ ; Video Viral.!

ನರಸಿಂಹಮೂರ್ತಿ ಈ ಹಿಂದೆ ಅಂದರೆ 2023ರ ಜುಲೈ 7ರಂದು ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುವಾಗ ನಿವೇಶನದ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಫಯಾಜ್‌ ಎಂಬುವರಿಗೆ ₹15 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದರು.

spot_img
spot_img
spot_img
- Advertisment -spot_img