Tuesday, October 22, 2024
spot_img
spot_img
spot_img
spot_img
spot_img
spot_img
spot_img

Lokayukta : ರೆಡ್ ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ಕೆ.ಎಸ್.ಆರ್.ಪಿ. ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಇದನ್ನು ಓದಿ : ವಿದ್ಯಾರ್ಥಿನಿಯರ ಬೆತ್ತಲೆ ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕ arrest.!

ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್‌ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಡ್ಯೂಟಿ ಹಾಕಲು ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಟ್ರ್ಯಾಪ್ ಆಗಿದ್ದಾರೆ.

ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್, ಕೆ.ಎಸ್.ಆರ್.ಪಿ. ಸಿಬ್ಬಂದಿಗೆ ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಪ್ರತಿ ತಿಂಗಳು 6 ಸಾವಿರ ರೂ. ಲಂಚ ನೀಡಲು ಡಿಮ್ಯಾಂಡ್ ಮಾಡಿದ್ದರು.

ಇದನ್ನು ಓದಿ : ಮದುವೆಯನ್ನೇ ಬ್ಯುಸಿನೆಸ್ ಮಾಡಿಕೊಂಡ ಲೇಡಿ ; ಪೊಲೀಸ್‌ ಅಧಿಕಾರಿಗಳು ಸೇರಿ 50 ಜನರ ಜೊತೆ ಮದುವೆ.!

ಅದರಂತೆ ಇಂದು ಆರೀಸ್ 18 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಎಸ್.ಪಿ. ನಟರಾಜ್, ಡಿವೈಎಸ್ಪಿ ಗಾನಾ ಪಿ.ಕುಮಾರ್, ಇನ್ಸ್‌ಪೆಕ್ಟರ್ ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್, ಚಂದ್ರಶೇಖರ್ ಸಿ.ಎಲ್ ನೇತೃತ್ವದಲ್ಲಿ‌ ಸಿಬ್ಬಂದಿಗಳ ತಂಡದ ಜೊತೆ ದಾಳಿ ನಡೆದಿದ್ದು, ಆರೀಸ್ ನನ್ನು ಈ ತಂಡ ವಶಕ್ಕೆ ಪಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img