ದಂಡ ಕಟ್ಟಲಾಗದೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಚಾಲಕ ಶವವಾಗಿ ಪತ್ತೆ.!
ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಠಾಣೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ಲಾರಿ ಚಾಲಕ ಬಸವಂತಕುಮಾರ್ (37) ಎಂದು ತಿಳಿದುಬಂದಿದೆ. ಈತ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಟ್ಟಿಗೆಹಳ್ಳಿ ನಿವಾಸಿಯಾಗಿದ್ದು, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು.
ಸಂಚಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಸಂಚಾರಿ ಪೊಲೀಸರು ಲಾರಿ ತಡೆಹಿಡಿದು ಲಾರಿ ಸಮೇತ ಚಾಲಕನನ್ನು ಪೊಲಿಸ್ ಠಾಣೆಗೆ ಕರೆತಂದಿದ್ದರು. ಆದರೆ ದಂಡ ಕಟ್ಟಲು ಹಣವಿಲ್ಲದೆ ಬಸವಂತಕುಮಾರ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ.
ಚಾಲಕನ ಪತ್ತೆಗಾಗಿ ಎಸ್ಪಿ ಕಚೇರಿ ಬಳಿ ಮೃತನ ಪೋಷಕರು ಪ್ರತಿಭಟನೆ ನಡೆಸಿದ್ದರು. ಪತ್ತೆ ಹಚ್ಚುವ ಪ್ರಯತ್ನ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಆದರೆ ನಿನ್ನೆ ಸಂಜೆ ಬಸವಂತ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.