ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆಯಾದ ಘಟನೆ ನಡೆದಿದೆ.
ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಹರ್ಷಿತ ಎನ್ನುವವರು ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
200 ವಿದ್ಯಾರ್ಥಿಗಳಿಂದ 25 ಲಕ್ಷ ಶುಲ್ಕ ಪಡೆದಿರುವ ಆರೋಪ ಉಪನ್ಯಾಸಕಿಯ ಮೇಲಿದೆ. ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ ಸುಮಾರು 25 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ಉಪನ್ಯಾಸಕಿ ಹರ್ಷಿತಾಗಾಗಿ ಹುಡುಕಾಟ ನಡೆಸಿದ್ದಾರೆ. Fees ಸಂದಾಯವಾಗದ ಹಿನ್ನೆಲೆ ಪ್ರವೇಶ ಪತ್ರ ನೀಡಲು ಕಾಲೇಜು ನಿರಾಕರಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದ್ದು, ಉಪನ್ಯಾಸಕಿಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ವರುಣಾ ಪೋಲಿಸ್ ಠಾಣೆಯಲ್ಲಿ ಉಪನ್ಯಾಸಕಿ ವಿರುದ್ಧ ಐಪಿಸಿ ಸೆಕ್ಷನ್ 468, 470, 420ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.