ನಡು ರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಬಿಜೆಪಿ ನಾಯಕನನ್ನು ಹೊಡೆದ ಗುಂಪು ; ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಿಜೆಪಿ ನಾಯಕರೊಬ್ಬರನ್ನು ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಗುಂಪೊಂದು ಅಟ್ಟಾಡಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರಪ್ರದೇಶದ ಗ್ರೇಟರ್​ ನೋಯ್ಡಾದ ಲಡ್​ಪುರದ ಕಸ್ನಾ ಎಂಬ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ಬಿಜೆಪಿ ನಾಯಕ ರಾಹುಲ್​ ಪಂಡಿತ್​ ಎಂದು ವರದಿಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ರಾಹುಲ್​ ಪಂಡಿತ್​ ಹಾಗೂ ಗುಂಪಿನ ನಡುವೆ ಯಾವುದೋ ಒಂದು ವಿಚಾರಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಈ ಹಲ್ಲೆ ನಡೆದಿದೆ. ಯಾವ ಕಾರಣಕ್ಕೆ ಗಲಾಟೆಯಾಯಿತು ಎಂದು ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಗಳು ತಲೆಮರಿಸಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬಿಜೆಪಿ ನಾಯಕ ರಾಹುಲ್​ ಪಂಡಿತ್​ ಮೇಲಿನ ಹಲ್ಲೆ ಉತ್ತರಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆಯ ಕುರಿತು ಕಳವಳ ವ್ಯಕ್ತವಾಗಿದೆ. ರಾಜಕೀಯ ನಾಯಕರಿಗೆ ರಕ್ಷಣೆ ಇಲ್ಲವೆಂದರೆ ಮಿಕ್ಕವರ ಗತಿಯೇನು ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ಕೆಂಡಕಾರಿರುವ ನೆಟ್ಟಿಗರು ಆಡಳಿತ ಪಕ್ಷದ ನಾಯಕನ ಮೇಲೆ ಹಾಡಹಗಲೇ ಈ ರೀತಿ ಥಳಿಸಿದರೆ ಸಾರ್ವಜನಿಕರ ಕಥೆಯೇನು.? ಶೀಘ್ರವೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಆಗ್ರಹಿಸಿದ್ದಾರೆ.