ಗೋಕಾಕ : ಬಾಕಿ ಬಿಲ್’ಗಾಗಿ ಶಾಲಾ ಕಟ್ಟಡ ಏರಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಣಚಿನಮರಡಿಯಲ್ಲಿ ಶಾಲಾ ಕಟ್ಟಡ ಕಾಮಗಾರಿ ಪೂರ್ಣಗೊಂಡರೂ ಬಾಕಿ ಬಿಲ್ ಬಾರದ ಹಿನ್ನಲೆ ಅದೇ ಶಾಲಾ ಕಟ್ಟಡ ಮೇಲೆ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ ರಾಮಣ್ಣ ಅಡಿವೆಪ್ಪ ಸರಕಪ್ಪಗೋಳ ಎಂದು ತಿಳಿದುಬಂದಿದೆ.

2018ರಲ್ಲಿ ಪ್ರೌಢ ಶಾಲಾ ಕಟ್ಟಡ ಕಾಮಗಾರಿ ಕೈಗೊಂಡಿದ್ದ ರಾಮಣ್ಣ ಅವರು ಎನ್ಸಿಸಿ ಕಂಪನಿಯಿಂದ ಸುಮಾರು 23 ಲಕ್ಷ ರೂ. ಬಿಲ್ ಬಾಕಿ ಉಳಿಸಿಕೊಂಡಿರುವುದಾಗಿ ಆರೋಪಿಸಿ ಸುಮಾರು 2 ಗಂಟೆಗಳ ಕಾಲ ಶಾಲೆಯ ಮೇಲೇರಿ ರಾಮಣ್ಣ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಕೂಡಲೇ ಪೊಲೀಸರು ಗುತ್ತಿಗೆದಾರನನ್ನು ಮನವೊಲಿಸಿ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.