ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನಲ್ಲಿ ಮಹಿಳಾ ಪಿಎಸ್ಐ ಪುತ್ರನೋರ್ವ ವ್ಹೀಲಿಂಗ್ ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.
ಮಹಿಳಾ ಪಿಎಸ್ಐ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಈತ ನಗರದ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ.
ಈ ವಿಡಿಯೋ ಗಮನಿಸಿದ ಮೈಸೂರಿನ ಸಿದ್ಧಾರ್ಥ ನಗರ ಸಂಚಾರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೈಸೂರಿನ ರಿಂಗ್ ರಸ್ತೆ, ರಾಜೀವ್ ನಗರಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ವ್ಹೀಲಿಂಗ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದ.
ಇದೀಗ ವ್ಹೀಲಿಂಗ್ ಪುಂಡಾಟಕ್ಕೆ ಮಹಿಳಾ ಪಿಎಸ್ ಐ ಪುತ್ರನೇ ಪೊಲೀಸರ ಅತಿಥಿಯಾಗಿದ್ದಾನೆ.