ಬೆಳಗಾವಿ : ನಡು ಬೀದಿಯಲ್ಲೇ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು.!

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ನಗರದ ನಡು ಬೀದಿಯಲ್ಲೇ ಬುಧವಾರ ತಡರಾತ್ರಿ ಯುವಕನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ಯವಕನನ್ನು ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ (26) ಎಂದು ಗುರುತಿಸಲಾಗಿದೆ.

ರಾತ್ರಿ ನಾಗರಾಜ್‌ ಬರುತ್ತಿದ್ದಾಗ ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಮೂರು ಜನ ಯುವಕರಿಂದ ನಾಗರಾಜ್ ಹತ್ಯೆಯಾಗಿದ್ದು, ಕೊಂದ ಬಳಿಕ ಮೂವರೂ ಒಂದೊಂದು ದಿಕ್ಕಿಗೆ ಎಸ್ಕೇಪ್ ಆಗಿದ್ದಾರೆ.

ಮೂಲಗಳ ಪ್ರಕಾರ ಕ್ಷುಲ್ಲಕ ಕಾರಣಕ್ಕೆ ಈ ಘಟನೆ ಸಂಭವಿಸಿರಿಬಹುದು ಎಂದು ಹೇಳಲಾಗುತ್ತಿದ್ದು, ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಡಿಸಿಪಿ ಶೇಖರ್, ಎಸಿಪಿ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶವ ಕಳಿಸಲಾಗಿದೆ.

https://www.kooapp.com/koo/harish_kera/78e58792-7eec-4c0d-a4e7-36137ab7f1d0