ಜನಸ್ಪಂದನ ನ್ಯೂಸ್, ಬೀದರ್ : ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೇಬಲ್
ಉಮೇಶ್ ನಾಯ್ಕ್ ಎಂದು ತಿಳಿದುಬಂದಿದೆ.
25 ವರ್ಷದ ಉಮೇಶ್ ಅವರು ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ಅಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಉಮೇಶ್ ನಾಯಕ್ ಅವರು ಮೂಲತಃ ವಿಜಯನಗರ ಜಿಲ್ಲೆಯವರು.
2021ರಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಆಯ್ಕೆಯಾಗಿ ಬೀದರ್ ನಲ್ಲಿ ನೇಮಕಾತಿ ಪಡೆದಿದ್ದರು. ಇನ್ನೂ ಉಮೇಶ್ ಹಲವು ತಿಂಗಳಿನಿಂದ ಬಸವಕಲ್ಯಾಣ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಸುತ್ತಿದ್ದರು. ಪ್ರೇಮ ವೈಫಲ್ಯದಿಂದ ನೊಂದು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಉಮೇಶ್ ನಾಯಕ್ ಹುಡುಗಿಯೋರ್ವಳನ್ನು ಪ್ರೀತಿಸುತ್ತಿದ್ದು, ಆಕೆ ಈಗ ಪ್ರೀತಿ ನಿರಾಕರಿಸಿದ್ದಳು ಎಂದು ಹೇಳಲಾಗಿದೆ. ಸದ್ಯ ಅವರ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಲೇ ಪೋಷಕರು ವಿಜಯ ನಗರದಿಂದ ಬರುತ್ತಿದ್ದಾರೆ.
ಬಸವ ಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.