ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ.!

ಜನಸ್ಪಂದನ ನ್ಯೂಸ್, ಆನೇಕಲ್ : ಬೆಂಗಳೂರು ನಗರ ಜಿಲ್ಲೆಯ ಆನೇಕಲ್  ತಾಲೂಕಿನ ಕರ್ನಾಟಕ ಗಡಿ ಭಾಗದ ಹೊಸೂರು ಬಳಿ ಮನೆಯ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಬರುವ ವೇಳೆ ಮೇಲೆರಗಿದ ಬೀದಿ ನಾಯಿಗಳು ತಲೆ, ಮುಖ ಹಾಗೂ ದೇಹದ ಹಲವು ಕಡೆ ಕಚ್ಚಿ ಗಾಯಗೊಳಿಸಿದೆ.

ಬಾಲಕಿ ಚೀರಾಡುತ್ತಿದ್ದಂತೆ ಓಡಿ ಬಂದು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಸ್ಥಳೀಯ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪುರಸಭೆ ಆಡಳಿತ ನಿರ್ಲಕ್ಷ್ಯದಿಂದ ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಹೆಚ್ಚಾಗಿದೆ. ಸಿಕ್ಕ-ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ ಎಂದು ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗು ಮೇಲೆ ಅಟ್ಯಾಕ್ ಮಾಡುತ್ತಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.