ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ.!

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಷ್ಟ್ರ ರಾಜಕೀಯ, ರಾಜ್ಯ ರಾಜಕೀಯ ಚಟುವಟಿಕೆ ಸೇರಿದಂತೆ ವಿವಿಧ ವಿಚಾರವಾಗಿ ಕೋಡಿಮಠ ಶ್ರೀಗಳು ಈ ಹಿಂದೆ ಭವಿಷ್ಯ ನುಡಿದಿದ್ದರು. ಈಗ ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಅದೇ ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗುತ್ತಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು, ಈ ವರ್ಷವೂ ಮಳೆಗೂ ತೊಂದರೆ ಇಲ್ಲ. ಅನ್ನಕ್ಕೂ ಕೊರತೆಯಿಲ್ಲ. ದೇಶ, ರಾಜ್ಯದಲ್ಲಿ ವಿಪರೀತ ಮಳೆಯಾಗುವ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಮಳೆಗೆ ಯಾವುದೇ ತೊಂದರೆ ಇಲ್ಲ. ಮೊನ್ನೆ ಬಂದ ರೀತಿಯೇ ಇನ್ನೂ ಭಾರೀ ಮಳೆ ಬರಲಿದೆ. ಗುಡುಗು ಸಹಿತ ಮಳೆಯಿಂದ ಅಪಮೃತ್ಯು ಉಂಟಾಗಲಿದೆ. ಪ್ರಕೃತಿಯಿಂದಲೂ ಬಹಳ ಹಾನಿಯಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯ ಸರ್ಕಾರದ ಕುರಿತಂತೆ ಮಾತನಾಡಿದ ಅವರು, ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಿದೆ. ಆದರೇ ಏನೂ ಆಗೋದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ. ಆನಂದ ಪಡುವವರಿಲ್ಲ.

ಜೊತೆಗೆ ರಾಜ್ಯ ಸರ್ಕಾರಕ್ಕೆ ಏನೂ ತೊಂದರೆ ಆಗೋದಿಲ್ಲ. ಇದನ್ನು ಬಿಟ್ಟು ನಾನು ಏನೂ ಹೇಳಲ್ಲ. ನನಗೆ ಎಲ್ಲರೂ ಬೇಕಾಗಿರೋರು ಎಂದು ಭವಿಷ್ಯ ನುಡಿದರು.