ಹೋಟೆಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್.!

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್‌ ಅಧಿಕಾರಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು.ಆರ್.ನಾಯರ್ ಎಂದು ತಿಳಿದುಬಂದಿದೆ.

ಮೃತ ನಾಯರ್ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿದ್ದರು.

ನಿನ್ನೆ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಬ್ಯಾಂಕ್ ಅಧಿಕಾರಿ ಉಳಿದು ಕೊಂಡಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು ಎಂದು ತಿಳಿದುಬಂದಿದೆ.

ಇನ್ನು ಈಜು ಕೊಳಕ್ಕೆ ಇಳಿಯುವ ಮುನ್ನ ಮದ್ಯಪಾನ ಮಾಡಿದ್ದರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ