ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ : ಆಡಿಯೋ ಮೆಸೇಜ್​ನಲ್ಲಿ ಬಯಲಾಯ್ತು ಹೆಂಡ್ತಿಯ ಕರಾಳ ಮುಖ.!

ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಂಜುನಾಥ್ (38) ಎಂದು ತಿಳಿದುಬಂದಿದೆ. ಇವರು ಬೆಂಗಳೂರಿನ ಬಿಎಂಆರ್ ಸಿಎಲ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರೀಯಾಂಕಳನ್ನು ಮದುವೆಯಾಗಿದ್ದರು. ಬಳಿಕ ದಂಪತಿ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಇಬ್ಬರ ಮಧ್ಯೆ ಹೊಂದಾಣಿಕೆ ಇರಲಿಲ್ಲ. ನೀನು ಹಳ್ಳಿ ಗುಗ್ಗು, ನಿನ್ನನ್ನ ಮದುವೆಯಾಗಲು ನನಗೆ ಇಷ್ಟ ಇರಲಿಲ್ಲ ಎಂದು ಪ್ರೀಯಾಂಕ ಮಂಜುನಾಥನಿಗೆ ಪದೇ ಪದೇ ಹೀಯಾಳಿಸುತ್ತಿದ್ದಳಂತೆ.

ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಈಗ ಮಂಜುನಾಥ್ ಪತ್ನಿಯ ಕಿರುಕುಳಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಯ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೇಸೆಜ್ ಕಳುಹಿಸಿದ್ದು, ನನಗೆ ಅವಳ ಜೊತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಆ ಮನೆಹಾಳಿಯಿಂದ ನಾನು ಸಾಯುತ್ತಿದ್ದೇನೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಆಡಿಯೋ ಮೇಸೆಜ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಈ ಬಗ್ಗೆ ಪತ್ನಿ ಪ್ರೀಯಾಂಕಳ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.