ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೇಬಲ್ ಮಹೇಶ್ (31) ಎಂದು ತಿಳಿದುಬಂದಿದೆ.
ಗದಗ ಮೂಲದವರಾದ ಮಹೇಶ್ ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ವಾಸವಾಗಿದ್ದರು.
ಮಧ್ಯಾಹ್ನ ವೇಳೆ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.
ಅವರ ಕುಟುಂಬ ಸದಸ್ಯರು ದೂರು ನೀಡಿದ ಬಳಿಕವಷ್ಟೇ ಕಾರಣ ತಿಳಿಯಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.