ರಾಷ್ಟ್ರೀಯ

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ಜನಸ್ಪಂದನ ನ್ಯೂಸ್, ದಾವಣಗೆರೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯದಲ್ಲಿ ಕೆಲ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಭಕ್ತರೊಬ್ಬರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪಕ್ಷಾಂತರ ಹೆಚ್ಚಾದರೂ ಕೂಡ ಒಂದೇ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬರಲಿದೆ ಎನ್ನುವ ಮೂಲಕ ಮತ್ತೊಂದು ಬಾರಿ ನರೇಂದ್ರ ಮೋದಿ ಪ್ರಧಾನಿ ಆಗಬಹುದು ಎಂಬ ಸೂಚ್ಯವನ್ನು ನೀಡಿದ್ದಾರೆ.

ಜೊತೆಗೆ ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ ಆತಂಕಪಡುವ ಅಗತ್ಯವಿಲ್ಲ.‌

ಕಾರ್ತಿಕ, ಸಂಕ್ರಾಂತಿ ವೇಳೆಗೆ‌ ರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮನುಷ್ಯ ಮಾಡಿದ ತಪ್ಪುಗಳನ್ನು ಭಗವಂತ ಕ್ಷಮಿಸುತ್ತಾನೆ. ಆದರೆ, ಎಲ್ಲ ತಿಳಿದು ತಪ್ಪು ಮಾಡಿದಾಗ ಕ್ಷಮಿಸಲಾರ.

ಇತ್ತೀಚಿನ ದಿನಗಳಲ್ಲಿ ಎಲ್ಲ ಗೊತ್ತಿದ್ದೂ ಮನುಷ್ಯ ಪ್ರಕೃತಿ, ನೆಲ, ಜಲ ಇವುಗಳ ನಿರಂತರ ದುರುಪಯೋಗ ಮಾಡುತ್ತಿದ್ದಾನೆ. ಇದರಿಂದ ನಾವು ಬರ, ಪ್ರವಾಹ ಸೇರಿ ಅನೇಕ ರೀತಿಯ ಪ್ರಕೃತಿ ವಿಕೋಪ ಎದುರಿಸುವಂತಾಗಿದೆ ಎಂದು ಹೇಳಿದರು.

editor

Ghataprabha : 591 306 Tq : Gokak, Dist : Belagavi Karnataka (INDIA) Contact : 9902516740 E-mail : janaspandhannews@gmail.com

error: Content is protected !!