ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಮಲ್ಲಾಪೂರ ಗ್ರಾಮದಲ್ಲಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿ ಮಲ್ಲಾಪುರ ಗ್ರಾಮದ ನಿವಾಸಿ ಪ್ರಜ್ವಲ್ ಮಲ್ಲೇಶ ಸುಂಕದ (16) ಎಂದು ತಿಳಿದುಬಂದಿದೆ. ವಿಷಯ ತಿಳಿದ ಕೂಡಲೆ ಬಾಲಕನನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಬಾಲಕ ಮೃತ ಪಟ್ಟಿದ್ದಾನೆ.
ಪ್ರಜ್ವಲ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಫೋನ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಪ್ರಜ್ವಲ್’ನನ್ನು ಹತ್ಯೆ ಮಾಡಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಬೈದ ಕಾರಣಕ್ಕೆ ಈ ಕೊಲೆ ನಡೆದಿದೆ.
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.