ಕಾಲೇಜು ಉಪನ್ಯಾಸಕರ ಸಂಶಯಾಸ್ಪದ ಸಾವು..!

ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಅವಲಗುರ್ಕಿ ಗ್ರಾಮದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.

ಮೃತ ಉಪನ್ಯಾಸಕ ಸುದರ್ಶನ್ (25) ಎಂದು ತಿಳಿದುಬಂದಿದೆ. ಇವರು ಮೂಲತಃ ಬಾಗೇಪಲ್ಲಿಯವರು.

ಸುದರ್ಶನ್ ಬಿಜಿಎಸ್ ಕಾಲೇಜಿನಲ್ಲಿ ಗಣಿತ ವಿಭಾಗದ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾಲೇಜು ಸಮೀಪದ ಆವಲಗುರ್ಕಿ ಗ್ರಾಮದಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.