ಜನಸ್ಪಂದನ ನ್ಯೂಸ್, ಡೆಸ್ಕ್ : ಅಣ್ಣನೋರ್ವ ತಂಗಿ ಕಾಣೆಯಾಗಿದ್ದಾಳೆ ಎಂದು ಶಂಕಿಸಿ ತನ್ನ ಸ್ನೇಹಿತನನ್ನೇ ಭೀಕರವಾಗಿ ಥಳಿಸಿ ಹತ್ಯೆಗೈದ ಘಟನೆ ದೆಹಲಿಯ ಮಾಲ್ವಿಯಾ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ
ಮೃತರು 22 ವರ್ಷದ ಪಂಕಜ್ ಎಂದು ವರದಿಯಿಂದ ತಿಳಿದು ಬಂದಿದೆ.
ವಿಫಿನ್ ಎಂಬಾತ ತಂಗಿ ಕಾಣೆಯಾಗಿರುವ ಬಗ್ಗೆ ಸ್ನೇಹಿತ ಪಂಕಜ್ ಜೊತೆಗೆ ಗಲಾಟೆ ಮಾಡಿದ್ದಾನೆ. ಈ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ ಎಂದ ಪಂಕಜ್ ತಿಳಿಸಿದ್ದಾನೆ. ಆದರೆ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ.
ಈ ವೇಳೆ ಕುಡಿದ ನಶೆಯಲ್ಲಿದ್ದ ವಿಫಿನ್, ಪಂಕಜ್‌ನ ಮೇಲೆ ಇಟ್ಟಿಗೆ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪಂಕಜ್‌ನನ್ನು ಅವರ ಅಣ್ಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆತ ಬದುಕುಳಿಯಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.