ಅಬಕಾರಿ ಡಿಸಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ.!

ಜನಸ್ಪಂದನ ನ್ಯೂಸ್, ದಾವಣಗೆರೆ : ಮದ್ಯದಂಗಡಿ ಪರವಾನಿಗೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಅಬಕಾರಿ ಉಪ ಆಯುಕ್ತೆ ಸೇರಿದಂತೆ ಅಬಕಾರಿ ಇಲಾಖೆಯ ನಾಲ್ವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಜಿಲ್ಲಾ ಅಬಕಾರಿ ಉಪ ಆಯುಕ್ತೆ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ, ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿ : ದಿನಕ್ಕೆ ಐದಾರು ಎಸಳು ಪುದೀನಾ ತಿಂದರೆ ಆಗುವ 10 ಆರೋಗ್ಯ ಪ್ರಯೋಜನಗಳು..!

ಡಿ.ಜಿ. ರಘುನಾಥ ಎಂಬುವರು ಹರಿಹರದ ಅಮರಾವತಿ ಬಳಿ ಸಿಎಲ್- 7 ಮದ್ಯದ ಅಂಗಡಿ ಪರವಾನಗಿ ಮಾಡಿಕೊಡಿ ಅಂತ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಅಧಿಕಾರಿಗಳು ಮೂರು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಪ್ರೀತಿಯಲ್ಲಿ ದ್ರೋಹ : ಮನನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ..!

ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ ಆರೋಪಿ ಅಶೋಕ ಎಚ್.ಎಂ. ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.