ಜನಸ್ಪಂದನ ನ್ಯೂಸ್, ಬೆಂಗಳೂರು : ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡುದಾರರಿಗೆ ಹೊಸ ರೂಲ್ಸ್ ಜಾರಿ ಮಾಡಿದೆ. ಅದೇನೆಂದರೆ ಬಿಪಿಎಲ್ ಕಾರ್ಡುದಾರರಿಗೆ ಪ್ರತೀ ತಿಂಗಳು ಅಕ್ಕಿ ಸೇರಿದಂತೆ ಇತರ ಪಡಿತರ ಸಾಮಗ್ರಿಗಳನ್ನು ನ್ಯಾಯಬೆಲೆ ಅಂಗಡಿಯ ಮುಖಾಂತರ ವಿತರಿಸುತ್ತಿದೆ.
ಆದ್ರೆ ಯಾವುದೇ ರಶೀದಿಯನ್ನು ನೀಡಲಾಗುತ್ತಿಲ್ಲ. ಇದೇ ಕಾರಣಕ್ಕೆ ಕೇಂದ್ರ ಸರಕಾರ ಹೊಸ ರೂಲ್ಸ್ ಜಾರಿ ಮಾಡಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸರಕಾರ ಮುದ್ರಿತ ರಶೀದಿಯನ್ನು ಉಚಿತವಾಗಿ ಕೇಂದ್ರ ಸರಕಾರ ನೀಡುತ್ತಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಹಾಗೂ ಕೇಂದ್ರ ಸರಕಾರದ ಯೋಜನೆಯನ್ನು ರಶೀದಿಯಲ್ಲಿ ಮುದ್ರಿಸಿ ಬಿಪಿಎಲ್ ಕಾರ್ಡುದಾರರಿಗೆ ನೀಡುವಂತೆ ಕೇಂದ್ರ ಸರಕಾರ ಮಹತ್ವದ ಆದೇಶ ಹೊರಡಿಸಿದೆ.
ಹೀಗಾಗಿ ಪಡಿತರ ಅಂಗಡಿಯಲ್ಲಿ ಇನ್ಮುಂದೆ ಪಡಿತರ ಸಾಮಗ್ರಿಗಳನ್ನು ಪಡೆದ ನಂತರದಲ್ಲಿ ಕಡ್ಡಾಯವಾಗಿ ಮುದ್ರಿತ ರಶೀದಿಯನ್ನು ಪಡೆದುಕೊಳ್ಳಲೇಬೇಕು.
ನ್ಯಾಯಬೆಲೆ ಅಂಗಡಿಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಅಕ್ಕಿ ಒದಗಿಸುವ ಕೇಂದ್ರವಾಗಿದೆ. ಈ ಯೋಜನೆಯನ್ನೂ ಜನರಿಗೆ ತಲುಪಿಸುವುದು ಯೋಜನೆಯ ಉದ್ದೇಶ ಎಂದು ಸರಕಾರ ಹೇಳಿಕೊಂಡಿದೆ.
ಕೊರೊನಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ಬಡವರಿಗೆ ಆಹಾರ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿತ್ತು.