ಜನಸ್ಪಂದನ ನ್ಯೂಸ್, ಡೆಸ್ಕ್ : 2 ಪಟಾಕಿ ತಯಾರಿಕಾ ಘಟಕಗಳಲ್ಲಿ ಸ್ಫೋಟ ಸಂಭವಿಸಿ 11 ಜನ ಸಾವಿಗೀಡಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ತಮಿಳುನಾಡಿನ ವಿರುಧನಗರ ಜಿಲ್ಲೆಯ ಶಿವಕಾಶಿ ಬಳಿಯ ಕಮ್ಮಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.