ಸರ್ಕಾರಿ ಮಹಿಳಾ ಅಧಿಕಾರಿಯ ಬರ್ಬರ ಹತ್ಯೆ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಸರ್ಕಾರಿ ಮಹಿಳಾ ಅಧಿಕಾರಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿರವ ಘಟನೆ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್  ಪ್ರತಿಮಾ ಎಂಬವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಈ ಭೀಕರ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದನ್ನು ಓದಿ : ಖಲಿಸ್ತಾನಿ ಉಗ್ರರಿಂದ ಇಂದಿರಾ ಗಾಂಧಿ ಜನ್ಮದಿನದಂದು ಏರ್ ಇಂಡಿಯಾ ವಿಮಾನ ಸ್ಫೋಟಿಸುವ ಬೆದರಿಕೆ ; ವಿಡಿಯೋ ರಿಲೀಸ್.!

ಡೆಪ್ಯುಟಿ ಡೈರೆಕ್ಟರ್  ಪ್ರತಿಮಾ ಅವರ ಹತ್ಯೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲ ಸಂದ್ರದ ಅಪಾರ್ಟ್ಮೆಂಟ್‌ ಒಂದರಲ್ಲಿ ನಡೆದಿದೆ. ಅಧಿಕಾರಿ ಪ್ರತಿಮಾ ಒಬ್ಬರೇ ಇದ್ದ ವೇಳೆ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಅಧಿಕಾರಿ ಪ್ರತಿಮಾ ಪತಿಯಿಂದ ದೂರವಾಗಿ ಒಬ್ಬಂಟಿಯಾಗಿ ಬದುಕುತ್ತಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಛೇರಿಯಿಂದ ಮನೆಗೆ ಚಾಲಕ ಡ್ರಾಪ್‌ ಮಾಡಿ ತೆರಳಿದ್ದಾರೆ. ನಂತರ ಬಂದ ಹಂತಕರು ಕೊಲೆ ಮಾಡಿ ಹೋಗಿದ್ದಾರೆ.

ಹತ್ಯೆ ಮಾಡಿರುವುದನ್ನು ನೋಡಿದರೆ, ಮೇಲ್ನೋಟಕ್ಕೆ ಪಕ್ಕಾ ಪ್ಲಾನ್ ಮಾಡಿ ಪರಿಚಿತರೇ ಈ ಕೃತ್ಯ  ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ : ಕೌಟುಂಬಿಕ ಕಲಹದ ಹಿನ್ನಲೆ ಯುವಕ ಆತ್ಮಹತ್ಯೆ ; ಇನ್ಸ್‌ಪೆಕ್ಟರ್ ಸೇರಿ 8 ಜನರ ವಿರುದ್ಧ ಎಫ್ಐಆರ್.!

ಮಹಿಳಾ ಅಧಿಕಾರಿಗೆ ಅವರ ಅಣ್ಣ ರಾತ್ರಿ ಕರೆ ಮಾಡಿದ್ದಾರೆ, ಆದರೆ ಕರೆ ಸ್ವೀಕರಿಸದ ಕಾರಣ ಬೆಳಗ್ಗೆ ಮನೆಗೆ ಬಂದು ನೋಡಿದಾಗ ಹತ್ಯೆ ವಿಷಯ ತಿಳಿದು ಬಂದಿದೆ. ಅಧಿಕಾರಿಯ ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.