ಜನಸ್ಪಂದನ ನ್ಯೂಸ್, ಗೋಕಾಕ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಶಿವಾಪೂರ ಗ್ರಾಮದ ಹೊರವಲಯದಲ್ಲಿ ಮಡ್ಡಿ ಸಿದ್ದಪ್ಪನ ದೇವಸ್ಥಾನದ ಬಳಿ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.
ಮೃತ ಯುವಕ ಸಾವಳಗಿಯ ಮುತ್ನಾಳ ಗ್ರಾಮದ ನಿವಾಸಿ ಶಿವಶಂಕರ ಮಗದುಮ್ಮ (35) ಎಂದು ತಿಳಿದುಬಂದಿದೆ.
ಶಿವಶಂಕರ ಅವರ ಮೇಲೆ ಕಣ್ಣಿಟ್ಟಿದ್ದ ದುಷ್ಕರ್ಮಿಗಳು ರಸ್ತೆ ಬದಿ ಊಟ ಮಾಡುವ ನೆಪ ಮಾಡಿ ಹೊಂಚು ಹಾಕಿ ಕುಳಿತಿದ್ದರು. ಇದನ್ನು ಓದಿ : ಯುವಕನ ಬೆರಳು ಕಟ್ ಮಾಡಿದ ನಂತರ ನರಬಲಿ ಕೊಟ್ಟ ಮಾಂತ್ರಿಕರು.!
ಶಿವಶಂಕರ ಬೈಕ್‌ನಲ್ಲಿ ಬರುತ್ತಿದ್ದಂತೆಯೇ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ದಾಳಿ ಮಾಡಿದ್ದಾರೆ. ಬಳಿಕ ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶಿವಶಂಕರ ಬೆಳಗಾವಿಯ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ತಮ್ಮ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಇನ್ನೂ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಿಪಿಐ ಗೋಪಾಲ್ ರಾಥೋಡ್ ಪಿಎಸ್‌ಐ ಕಿರಣ್ ಮೋಹಿತ್ ಹಾಗೂ ಪೊಲೀಸ್ ಸಿಬ್ಬಂದಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಇದನ್ನು ಓದಿ : ಬಿಜೆಪಿ ಮುಖಂಡ ಅನುಮಾನಾಸ್ಪದ ರೀತಿಯಲ್ಲಿ ಸಾವು ; ಕೊಲೆ ಶಂಕೆ.?
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.