ಭೀಕರ ಸರಣಿ ರಸ್ತೆ ಅಪಘಾತ : ಮೂವರ ಸಾವು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಟೋಲ್ ಪ್ಲಾಜಾದಲ್ಲಿ ನಿಂತಿದ್ದ ವಾಹನಗಳಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, 6 ಜನ ಗಾಯಗೊಂಡ ಘಟನೆ ಮುಂಬೈನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ವೇಗವಾಗಿ ಕಾರನ್ನು ವರ್ಲಿಯಿಂದ ಬಾಂದ್ರಾ ಕಡೆಗೆ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅತೀ ವೇಗವಾಗಿ ಬಂದ ಇನ್ನೋವಾ ಕಾರು ಮೊದಲು ಮರ್ಸಿಡಿಸ್ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಲ್ಲಿಂದ ಮುಂದುವರೆದ ಕಾರು ಟೋಲ್ ಪ್ಲಾಜಾ ಬಳಿ ನಿಂತಿದ್ದ ಮೂರು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ ಎಂದು ಡಿಸಿಪಿ ಕೃಷ್ಣಕಾಂತ್ ಉಪಾಧ್ಯಾಯ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನು ಓದಿ : ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ಗ್ಯಾಂಗ್​ಸ್ಟರ್​ನನ್ನು ಹೊಡೆದು ಕೊಂದ ವೈದ್ಯರು.!

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನು ಅಪಘಾತದ ತೀವ್ರತೆಗೆ ಕಾರುಗಳು ನುಜ್ಜುಗುಜ್ಜಾಗಿದ್ದು ಇನ್ನೋವಾ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಆರೋಗ್ಯ ಸುಧಾರಿಸಿದ ಬಳಿಕ ಆತನನ್ನು ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.