ದುಷ್ಕರ್ಮಿಗಳಿಂದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ.!

ಜನಸ್ಪಂದನ ನ್ಯೂಸ್, ಉಡುಪಿ : ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಚೂರಿಯಿಂದ ಚುಚ್ಚಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆ ಮಲ್ಪೆ (Mulpe)ಠಾಣಾ ವ್ಯಾಪ್ತಿಯ ತೃಪ್ತಿನಗರದ ನೇಜಾರು ಎಂಬಲ್ಲಿ ಇಂದು (ಭಾನುವಾರ) ನಡೆದಿದೆ.

ಕೊಲೆಯಾದ ದುರ್ದೈವಿಗಳನ್ನು ಹಸೀನಾ(46), ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಗೋಕಾಕ : ವಿವಾಹಿತ ಮಹಿಳೆಯ ಬರ್ಬರ ಹತ್ಯೆ.!

ದುಷ್ಕರ್ಮಿಗಳು ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದು, ಇವರಲ್ಲಿ ತಾಯಿ ಮತ್ತು ಮೂವರು ಮಕ್ಕಳು ಹತ್ಯೆಯಾಗಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಪರಿಚಿತ ವ್ಯಕ್ತಿಯೊಬ್ಬ (Unknown person)ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅನುಮಾಸ್ಪದ ವ್ಯಕ್ತಿಗಳಲ್ಲಿ ಓರ್ವ ಬೋಳು ತಲೆಯವನಿದ್ದನೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದನ್ನೂ ಓದಿ : ಬೆಳಗಾವಿಯಲ್ಲಿ ಡೀಪ್​ ಫೇಕ್​ ಕೇಸ್ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಪೋಟೋ ಅಶ್ಲೀಲವಾಗಿ ಎಡಿಟ್ ಮಾಡಿದ ಯುವಕ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆಯಿಂದಷ್ಟೇ ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.