ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆಯ ಮೇಲುಕೋಟೆ ಠಾಣಾ ವ್ಯಾಪ್ತಿಯಲ್ಲಿ ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರಿಗೆ ಕಾಮುಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಶಾಲೆಯ ಹಳೆ ವಿದ್ಯಾರ್ಥಿ ಯೋಗಿ ಎಂಬಾತ ಮಕ್ಕಳಿಗೆ ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನು ಬಳಸಿಕೊಂಡು ಹೀನ ಕೃತ್ಯ ಎಸಗಿದ್ದಾನೆ.
ಇದನ್ನು ಓದಿ : ಹಾಸ್ಟೆಲ್‌ನಲ್ಲಿ ನೀಡಿದ ಚಟ್ನಿಯಲ್ಲಿ ಜೀವಂತ ಇಲಿ ಕಂಡು ಅಸಹ್ಯಪಟ್ಟ ವಿದ್ಯಾರ್ಥಿಗಳು ; ಶಾಕಿಂಗ್ video ವೈರಲ್.!
ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯರ ನಗ್ನ ಫೋಟೋ ತೆಗೆದು ಬ್ಲ್ಯಾಕ್ ಮೇಲ್ (Blackmail) ಮಾಡಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಘಟನೆಯ ಕುರಿತು ನಾಲ್ವರು ವಿದ್ಯಾರ್ಥಿನಿಯರು ನೀಡಿದ ಹೇಳಿಕೆಯನ್ನು ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಎಸ್.ಎಂ.ಶೈಲಜಾ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು 15-17 ವರ್ಷದವರಾಗಿದ್ದಾರೆ.
ಈತ ಶಾಲೆಯ ಸಮೀಪ ಸ್ವಂತ ತರಬೇತಿ ಕೇಂದ್ರ ನಡೆಸುತ್ತಿದ್ದ, ಹೀಗಾಗಿ ಕೆಲ ವಿದ್ಯಾರ್ಥಿನಿಯರು ಕ್ರೀಡೆ, ಚಿತ್ರಕಲೆಯಲ್ಲಿ ಆಸಕ್ತಿ ಇದ್ದ ಕಾರಣ ತರಬೇತಿಗೆ ಸೇರಿಕೊಂಡಿದ್ದರು.
ಇನ್ನೂ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ, ಕದ್ದು ತನ್ನ ಮೊಬೈಲ್‌ನಲ್ಲಿ ಹುಡುಗಿಯರ ಬೆತ್ತಲೆ, ಅರೆ ಬೆತ್ತಲೆ ಫೋಟೋಗಳನ್ನು ತೆಗೆದು, ಪೋಷಕರಿಗೆ ಕಳುಹಿಸುವುದಾಗಿ ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನು ಓದಿ : PM ಆವಾಸ್ ಯೋಜನೆಯ ಹಣ ಬರ್ತಿದ್ದಂತೆ ಪ್ರಿಯಕರರೊಂದಿಗೆ ಓಡಿಹೋದ 11 ಮಹಿಳೆಯರು.?
ತನ್ನೊಂದಿಗೆ ಮಲಗುವಂತೆ ಬಲವಂತ ಮಾಡುತ್ತಿದ್ದ. ತರಬೇತಿ ನೀಡುವ ವೇಳೆ ಕೆಟ್ಟದಾಗಿ ವರ್ತಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸದ್ಯ ವಿದ್ಯಾರ್ಥಿನಿಯರು ಹೇಳಿಕೆ ಕೂಡ ಕೊಟ್ಟಿದ್ದಾರೆ. ಆರೋಪಿ ವಿರುದ್ದ ಮೇಲುಕೋಟೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.