Saturday, July 27, 2024
spot_img
spot_img
spot_img
spot_img
spot_img
spot_img

News : ಭೀಕರ ಅಪಘಾತದಲ್ಲಿ ಕನ್ನಡದ ಕಿರುತೆರೆ ನಟಿ ಸಾ**ವು.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ (accident) ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಲಾಡ್ಜ್’ನಲ್ಲಿ ಇಬ್ಬರೊಂದಿಗೆ ರೊಮ್ಯಾನ್ಸ್ ಮಾಡುವಾಗ ಪತಿಯ ಕೈಗೆ ಸಿಕ್ಕಿಬಿದ್ದ ವೈದ್ಯೆ ; ಮುಂದೆನಾಯ್ತು ಈ Video ನೋಡಿ.!

ಮೆಹಬೂಬ್‌ ನಗರದಲ್ಲಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ (serious injuries) ನಟಿ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಪವಿತ್ರಾ ಅವರು ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ. ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು.

ಇದನ್ನು ಓದಿ : Belagavi : ಭೀಕರ ರಸ್ತೆ ಅಪಘಾತ ; ಮೂವರು ಮಹಿಳೆಯರ ಸಾ**ವು.!

ನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ.

ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವು ಎಂದಿದ್ದರು.

spot_img
spot_img
- Advertisment -spot_img