Wednesday, May 22, 2024
spot_img
spot_img
spot_img
spot_img
spot_img
spot_img

KAS ಅಧಿಕಾರಿಯ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಹಾಗೂ ಹೈಕೋರ್ಟ್‌ ವಕೀಲರಾದ (high court lawyer) ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ​ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ವಿಮಾನದಿಂದ ಪ್ಯಾರಾಚೂಟ್​ ಧರಿಸದೆ 12 ಸಾವಿರ ಅಡಿಗಳಿಂದ ಜಿಗಿದ ಯುವಕ ; ಮುಂದೆನಾಯ್ತು Video ನೋಡಿ.!

ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ ಎನ್ನಲಾಗಿದೆ.

ಇನ್ನೂ ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನು ಓದಿ : Video : ಮಹಿಳೆಯ ಕುತ್ತಿಗೆಗೆ ಬೆಲ್ಟ್​​​ನಿಂದ ಬಿಗಿದು ಪ್ರಜ್ಞೆ ತಪ್ಪಿಸಿ ದುಷ್ಕರ್ಮಿಯಿಂದ ಅತ್ಯಾಚಾರ.!

ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆಯ ಕುರಿತು ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

spot_img
spot_img
spot_img
- Advertisment -spot_img