Monday, November 4, 2024
spot_img
spot_img
spot_img
spot_img
spot_img
spot_img

Romance : ಗ್ರಾಮ ಪಂಚಾಯಿತಿಯಲ್ಲಿಯೇ ಸಿಬ್ಬಂದಿಯ ಸರಸ ಸಲ್ಲಾಪ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಕೋಲಾರ : ಸದ್ಯ ರಾಜ್ಯದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ (Porn video) ಪೆನ್‌ಡ್ರೈವ್ ಪ್ರಕರಣ ಸಾಕಷ್ಟು ಸದ್ದು ಗದ್ದಲಗಳನ್ನು ಎಬ್ಬಿಸಿದೆ.

ಅಂತೆಯೇ ಕೋಲಾರದ ಜಿಲ್ಲೆಯ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿ ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇದನ್ನು ಓದಿ : SSLC ಪಾಸಾಗಿದ್ದೀರಾ : ಕರ್ನಾಟಕದಲ್ಲಿದೆ ಪೋಸ್ಟ್ ಆಫೀಸ್‌ನಲ್ಲಿ ಉದ್ಯೋಗ ; ನಾಳೆಯೇ ಕೊನೆಯ ದಿನ.!

ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ (Gram Panchayat Bill Collector) ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗುತ್ತಿವೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ ಕಚೇರಿ ಕೆಲಸದ ಅವಧಿಯಲ್ಲಿ ಖುಲ್ಲಂ, ಖುಲ್ಲಾ ಕಿಸ್ಸಿಂಗ್ ಮಾಡಿ ಅದನ್ನು ಸೆಲ್ಫಿ ತೆಗೆದುಕೊಂಡ ಘಟನೆ ನಡೆದಿದೆ.

ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ (Sexual assault) ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಪಂಚಾಯಿತಿ ಕಾರ್ಯಾಲಯದಲ್ಲಿಯೇ ಎಲ್ಲಾ ಒಪನ್ ಆಗಿಯೇ ಕಿಸ್‌ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ.

ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮಚೇಷ್ಟೆ ಮಾಡ್ತಾನೆ ಎನ್ನಲಾಗಿದೆ. ಅಲ್ಲದೇ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ (Free Government House) ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡುವುದನ್ನು ಮಾಡಿದ್ದಾನೆ. ಆಗ ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ.

ಇದನ್ನು ಓದಿ : 1963ರಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ.? ; ವೈರಲ್ ಆಗ್ತಿದೆ ಹಳೆಯ Bill.!

ನಂತರದ ದಿನಗಳಲ್ಲಿ ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಬೆದರಿಕೆ ಹಾಕಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ನಿಮ್ಮನ್ನು ಕೆಲಸದಿಂದ ತೆಗೆದು ಹಾಕುತ್ತೇನೆ. ಜೊತೆಗೆ, ನೀನು ಮುತ್ತು ಕೊಡುವುದು ಹಾಗೂ ನನ್ನೊಂದಿಗೆ ಖಾಸಗಿಯಾಗಿ (private) ಕಳೆದ ಕ್ಷಣಗಳ ಫೋಟೋ ವೈರಲ್ ಮಾಡುತ್ತೇನೆ ಎಂದು ಬೆದರಿಸಿದ್ದಾನೆ ಎಂದು ತಿಳಿದು ಬಂದಿದೆ.

ಸದ್ಯ ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಇನ್ನು ಪೊಲೀಸರು ಆರೋಪಿ ಅರ್ಜುನ ಹರಿಕೃಷ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img