Sunday, December 8, 2024
HomeState Newsಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ Rowdy Sheeter ಬರ್ಬರ ಹತ್ಯೆ.!
spot_img

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ Rowdy Sheeter ಬರ್ಬರ ಹತ್ಯೆ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ನಗರದ (Shivamog) ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಹಾಡಹಗಲೇ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ (Brutally murdered) ಘಟನೆ ನಡೆದಿದೆ.

ಹಳೇ ಬೊಮ್ಮನಕಟ್ಟೆ ಮುಖ್ಯರಸ್ತೆಯ ಮಾರಮ್ಮನಗುಡಿ ಬಳಿ ಗ್ಯಾರೇಜ್ ಸಮೀಪ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Vitamin B Complex ಸೇರಿ ಈ 90 ಔಷಧಿಗಳು ಗುಣಮಟ್ಟದ ಪರೀಕ್ಷೆಗಳಲ್ಲಿ ಫೇಲ್.!

ಕೊಲೆಗೀಡಾದ ರೌಡಿ ಶೀಟರ್ (murderous rowdy sheeter) ರಾಜೇಶ್ ಶೆಟ್ಟಿ (38) ಎಂದು ತಿಳಿದು ಬಂದಿದೆ.

ದುಷ್ಕರ್ಮಿಗಳು ಹಳೆಯ ದ್ವೇಷದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು, ಈ ವೇಳೆ ರಾಜೇಶ್ ಶೆಟ್ಟಿಯು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (Additional Superintendent of Police) ಅನಿಲ್ ಕುಮಾರ್ ಭೂಮರೆಡ್ಡಿ ಹಾಗೂ ವಿನೋಬನಗರ ಠಾಣೆಯ ಪೊಲೀಸರು (Vinobanagar police station) ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : ಹೆತ್ತಮ್ಮ, ಮಡದಿ, ಮಕ್ಕಳನ್ನು ಕೊಂದ ಅಪರಾಧಿಗೆ ಮರಣದಂಡನೆ ವಿಧಿಸಿದ Court.!

ಕೊಲೆಯಾದ ರಾಜೇಶ್ ಶೆಟ್ಟಿಯು ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು, ಈತನ ವಿರುದ್ದ ಆರೇಳು ಪ್ರಕರಣಗಳಿವೆ (six cases) ಎಂದು ತಿಳಿದು ಬಂದಿದೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರಾಜೇಶ್ ಎಂಬಾತನ ಹತ್ಯೆ ನಡೆದಿದೆ. ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಆತನ ಪತ್ತೆಗೆ 3 ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ (personal reason) ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ಮಾಹಿತಿ (primary information) ಲಭ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ತಿಳಿಸಿದ್ದಾರೆ.

ಹಿಂದಿನ ಸುದ್ದಿ : Vitamin B Complex ಸೇರಿ ಈ 90 ಔಷಧಿಗಳು ಗುಣಮಟ್ಟದ ಪರೀಕ್ಷೆಗಳಲ್ಲಿ ಫೇಲ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಕೇಂದ್ರದ ಆರೋಗ್ಯ ಸಚಿವಾಲಯವು (Ministry of Health) ಅಕ್ಟೋಬರ್ ತಿಂಗಳಲ್ಲಿ ದೇಶದ ವಿವಿಧೆಡೆ ಪರೀಕ್ಷೆಗೆ ಒಳಪಟ್ಟ 90 ಔಷಧಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ (Does not have standard quality) ಎಂದು ತಿಳಿಸಿದೆ.

ಇದನ್ನು ಓದಿ : Health : ದೇಹದ ಮೇಲೆ ಕಂಡು ಬರುವ ಮುದ್ದೆಯಂತಹ ಈ ಗುಳ್ಳೆಗಳನ್ನು ಹೋಗಲಾಡಿಸುವುದು ಹೇಗೆ.?

ಅಕ್ಟೋಬರ್‌ ತಿಂಗಳಿನಲ್ಲಿ ಕೇಂದ್ರದ ಔಷಧ ಪ್ರಯೋಗಾಲಯಗಳಲ್ಲಿ (laboratories) ಪರೀಕ್ಷಿಸಲಾದ 56 ಔಷಧ ಮಾದರಿಗಳು ಪ್ರಮಾಣಿತ ಗುಣಮಟ್ಟ (NSQ) ಹೊಂದಿಲ್ಲ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (Central Drug Quality Control Agency) ಪತ್ತೆ ಮಾಡಿದೆ ಎಂದು ವರದಿಯಾಗಿದೆ.

ವಿಟಮಿನ್ ಬಿ ಕಾಂಪ್ಲೆಕ್ಸ್ ಮತ್ತು ವಿಟಮಿನ್ ಸಿ ಸಾಫ್ಟ್ಜೆಲ್ (Vitamin B Complex and Vitamin C Softgel), ವಿಟಮಿನ್ ಸಿ ಮತ್ತು ಡಿ 3 ಮಾತ್ರೆಗಳು ಶೆಲ್ಕಾಲ್ (D3 Tablets Shellcol), ಅಧಿಕ ರಕ್ತದೊತ್ತಡ ಔಷಧ ಟೆಲ್ಮಿಸಾರ್ಟನ್, ಆಂಟಾಸಿಡ್ ಪ್ಯಾನ್ -ಡಿ (Antacid Pan- D), ಪ್ಯಾರೆಸಿಟಮಾಲ್ ಐಪಿ 500 ಮಿಗ್ರಾಂ, ಮಧುಮೇಹ ಔಷಧ ಗ್ಲಿಮೆಪಿರೈಡ್ (diabetes drug glimepiride) ಮುಂತಾದ ಔಷಧಿಗಳ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಈ ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ (failed) ಎಂದು ಘೋಷಿಸಲಾಗಿದೆ.

ಇದನ್ನು ಓದಿ : Video : ಬೇರೊಬ್ಬನೊಂದಿಗೆ ಸಿಕ್ಕಿಬಿದ್ದ ಪ್ರೇಯಸಿ ; ಗಿಪ್ಟ್ ಕೊಟ್ಟ ಸ್ಕೂಟಿ ವಾಪಸ್ ಕಿತ್ತುಕೊಂಡ ಬಾಯ್‌ಫ್ರೆಂಡ್‌.!

ಕೇಂದ್ರದ ಆರೋಗ್ಯ ಸಚಿವಾಲಯವು, ರಾಜ್ಯ ಔಷಧ ನಿಯಂತ್ರಕರು (State drug regulators) ಪರೀಕ್ಷಿಸಿದ 34 ಔಷಧಿ ಮಾದರಿಗಳು ಸಹ ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂದು ತಿಳಿಸಿದೆ.

ಬಿಹಾರ ಔಷಧ ನಿಯಂತ್ರಣ ಪ್ರಾಧಿಕಾರ (Bihar Drug Control Authority) ನಡೆಸಿದ ಪರೀಕ್ಷೆಯಲ್ಲಿ ಇನ್ನೂ ಮೂರು ಔಷಧ ನಕಲಿ ಎಂದು ಗುರುತಿಸಲಾಗಿದೆ. ಅನಧಿಕೃತ ಉತ್ಪಾದಕರು (Unauthorized producers) ಮತ್ತೊಂದು ಕಂಪನಿಯ ಬ್ರ್ಯಾಂಡ್ ಅನ್ನು ಬಳಸಿಕೊಂಡು ಈ ಔಷಧಗಳನ್ನು ತಯಾರಿಸಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಇನ್ನೂ ಈ ಬಗ್ಗೆ ತನಿಖೆ ಆರಂಭಗೊಂಡಿದೆ.

ಇದನ್ನು ಓದಿ : ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಕೆಲಸಕ್ಕೆ ಅನರ್ಹ : Supreme Court ಮಹತ್ವದ ತೀರ್ಪು

ನಕಲಿ ಔಷಧಗಳನ್ನು ಗುರುತಿಸಿ, ಮಾರುಕಟ್ಟೆಯಿಂದ ತೆಗೆದು ಹಾಕಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯಗಳ ಔಷಧ ನಿಯಂತ್ರಣ ಪ್ರಾಧಿಕಾರಗಳ ಜೊತೆ ನಕಲಿ ಮತ್ತು ಪ್ರಮಾಣಿತ ಗುಣಮಟ್ಟವಿಲ್ಲದ (Substandard) ಔಷಧಗಳ ಪತ್ತೆ ಮಾಡುವ ಕಾರ್ಯವನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಇನ್ನೂ ಒಂದು ಅಥವಾ ಎರಡು ಗುಣಮಟ್ಟ ಮಾನದಂಡಗಳಲ್ಲಿ ವಿಫಲವಾದ ಆಧಾರದ ಮೇಲೆ ಅಳೆಯಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments