Saturday, July 27, 2024
spot_img
spot_img
spot_img
spot_img
spot_img
spot_img

KPSC ಯಿಂದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 426 ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ಲೋಕಸೇವಾ ಆಯೋಗ (KPSC) ದಿಂದ ಗ್ರೂಪ್ – ಸಿ ಹುದ್ದೆಗಳ ನೇಮಕಾತಿ ಕುರಿತಂತೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ  426 ಗ್ರೂಪ್ – ಸಿ (HK & NHK) ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Health : ಹೊಟ್ಟೆ ತುಂಬಿದರೂ ಸಹ ಅತಿಯಾಗಿ ಊಟ ಮಾಡ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಹುದ್ದೆಗಳ ಹೆಸರು :

  • ರಾಜ್ಯ ವೃಂದದಲ್ಲಿ ಖಾಲಿ ಇರುವ ಹುದ್ದೆಗಳು : 313 ಹುದ್ದೆಗಳು.  
  • ಸ್ಥಳೀಯ ವೃಂದದಲ್ಲಿ ಖಾಲಿಇರುವ ಹುದ್ದೆಗಳು : 113 ಹುದ್ದೆಗಳು.
  • ಒಟ್ಟು ಹುದ್ದೆಗಳು : 426 ಹುದ್ದೆಗಳು.

ವೇತನ :

  • ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಲಿದೆ. ಜೊತೆಗೆ  ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಅಥವಾ ಪದವಿ ಪೂರ್ವ ಹಂತದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ :

  • ಸಾಮಾನ್ಯ ಅಭ್ಯರ್ಥಿಗಳು : ರೂ. 600/-
  • ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು : ರೂ. 300/-
  • ಮಾಜಿ ಸೈನಿಕ ಅಭ್ಯರ್ಥಿಗಳು : ರೂ. 50/-
  • ಪ.ಜಾ/ಪಪಂ/C-1/ಅಂಗವಿಕಲ ಸೇರಿದ ಅಭ್ಯರ್ಥಿಗಳು : ಶುಲ್ಕ ವಿನಾಯಿತಿ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಅಥವಾ ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬಹುದು. 

Health : ನಿಮಗೆ ತಲೆ ಸುತ್ತುತ್ತಿದೆಯೇ.? ಕಾರಣ ಇದಾಗಿರಬಹುದು ; ಚಿಕಿತ್ಸೆಗಾಗಿ ಈ ಸುದ್ದಿ ಓದಿ.!

ವಯೋಮಿತಿ :

  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ :

  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST) : 05 ವರ್ಷ.
  • ಇತರೆ ಹಿಂದೂಳಿದ ವರ್ಗ (OBC) : 03 ವರ್ಷ.
  • ಅಂಗವಿಕಲ (PWD) : ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ :

  • ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ :

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28.04.2024 ರಿಂದ 10.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ  ವೆಬ್ ಸೈಟ್ www.kpsc.kar.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಬಾಲಿವುಡ್‌ನಲ್ಲಿ ಖುಲಾಯಿಸದ luck ; ಬಿಕಿನಿ ಮಾರಲು ಮುಂದಾದ ವಿಶ್ವ ಸುಂದರಿ.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 28-04-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-06-2024

ಪ್ರಮುಖ ಲಿಂಕುಗಳು :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img