Saturday, February 15, 2025
HomeNational Newsಕುಂಭಮೇಳ Special ರೈಲುಗಳು : ಬೆಳಗಾವಿ, ಘಟಪ್ರಭಾ, ಸಾಂಗ್ಲಿ ಮೂಲಕ ಸಂಚಾರ.!
spot_img
spot_img
spot_img
spot_img

ಕುಂಭಮೇಳ Special ರೈಲುಗಳು : ಬೆಳಗಾವಿ, ಘಟಪ್ರಭಾ, ಸಾಂಗ್ಲಿ ಮೂಲಕ ಸಂಚಾರ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ನೌಕರಿ : ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ.

*ವಿವರಗಳು ಈ ಕೆಳಗಿನಂತಿವೆ:*

1.ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು (07379/07380) ಸಂಚಾರ :

* ರೈಲು ಸಂಖ್ಯೆ 07379 :
ರೈಲು ಸಂಖ್ಯೆ 07379 ಎಸ್ಎಸ್ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 20 ರಂದು (ಸೋಮವಾರ) 00:45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಜನವರಿ 22 ರಂದು (ಬುಧವಾರ) 02:30 ಗಂಟೆಗೆ ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಕ್ಕೆ ತಲುಪಲಿದೆ.

* ರೈಲು ಸಂಖ್ಯೆ 07380 :
ತುಂಡ್ಲಾ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 23 ರಂದು (ಗುರುವಾರ) 16:00 ಗಂಟೆಗೆ ತುಂಡ್ಲಾದಿಂದ ಹೊರಟು, ಜನವರಿ 25 ರಂದು (ಶನಿವಾರ) 18:40 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನು ಓದಿ : Mahakumbha ಮೇಳದಲ್ಲಿ ಭಾರೀ ಅಗ್ನಿ ಅವಘಡ ; ಹೊತ್ತಿ ಉರಿಯುತ್ತಿರುವ ಟೆಂಟ್‌ಗಳು.!

2.ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು (07381/07382) ಸಂಚಾರ

* ರೈಲು ಸಂಖ್ಯೆ 07381 :
ರೈಲು ಸಂಖ್ಯೆ 07381 ಎಸ್ಎಸ್ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರುವರಿ 6 ರಂದು (ಗುರುವಾರ) 20:10 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಫೆಬ್ರುವರಿ 8 ರಂದು (ಶನಿವಾರ) 20:15 ಗಂಟೆಗೆ ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಕ್ಕೆ ತಲುಪಲಿದೆ.

* ರೈಲು ಸಂಖ್ಯೆ 07382 :
ತುಂಡ್ಲಾ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರುವರಿ 9 ರಂದು (ಭಾನುವಾರ) 16:20 ಗಂಟೆಗೆ ತುಂಡ್ಲಾದಿಂದ ಹೊರಟು, ಫೆಬ್ರುವರಿ 11 ರಂದು (ಮಂಗಳವಾರ) 18:40 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ಎರಡೂ ರೈಲುಗಳು ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, *ಸಾಂಗ್ಲಿ, ಕಿರ್ಲೋಸ್ಕರವಾಡಿ, ಕರಾಡ,* ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್ ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ಪಿಪಾರಿಯಾ, ನರಸಿಂಗಪುರ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್‌ಪುರ್, ಪ್ರಯಾಗ್‌ರಾಜ್ ಜಂಕ್ಷನ್, ಫತೇಪುರ್, ಗೋವಿಂದಪುರಿ ಮತ್ತು ಇಟಾವಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಇದನ್ನು ಓದಿ : Health : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?

ಬೋಗಿಗಳ ಸಂಯೋಜನೆ :
ಈ ರೈಲುಗಳು 1 ಎಸಿ ಟು ಟೈರ್, 6 ಎಸಿ ತ್ರಿ ಟೈರ್, 12 ಸ್ಲೀಪರ್ ಕ್ಲಾಸ್, 1 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಬ್ರೇಕ್ ವ್ಯಾನ್ ಮತ್ತು 1 ಲಗೇಜ್ / ಜನರೇಟರ್ / ಬ್ರೇಕ್ ವ್ಯಾನ್ ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ಡಾ. ಮಂಜುನಾಥ ಕನಮಡಿ
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈರುತ್ಯ ರೈಲ್ವೆ, ಹುಬ್ಬಳ್ಳಿ ಅವರು ತಿಳಿಸಿದ್ದಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!