Thursday, April 25, 2024
spot_img
spot_img
spot_img
spot_img
spot_img
spot_img

Lokayukta : ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಲೇಡಿ ತಹಶೀಲ್ದಾರ್.!

spot_img

ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ (Chikkanayakanahalli) ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ಆಗಿ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಲೋಕಾಯುಕ್ತ ಬಲೆಗೆ (Lokayukta trap) ಬಿದ್ದ ತಹಶೀಲ್ದಾರ್ ಗೀತಾ ಎಂದು ತಿಳಿದು ಬಂದಿದ್ದು, ಇವರು ಚಿಕ್ಕನಾಯಕನಹಳ್ಳಿಯಲ್ಲಿ ತಹಶೀಲ್ದಾರ್ ಕಾರ್ಯ ನಿರ್ವಹಿಸುತ್ತಿದ್ದರು.

ಇದನ್ನು ಓದಿ : Video : ಆಟವಾಡಲು ಹೋಗಿ ಈಜುಕೊಳದಲ್ಲಿ ಮುಳುಗುತ್ತಿದ್ದ ಪುಟ್ಟ ತಂಗಿಯ ಪ್ರಾಣ ಉಳಿಸಿ ಅಣ್ಣ.!

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯ ರೈತ ಮಲ್ಲಿಕಾರ್ಜುನ್ ನಿಂದ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ.

ರೈತ ಮಲ್ಲಿಕಾರ್ಜುನ್ ಅವರ 33 ಗುಂಟೆ ಜಮೀನನ್ನು ಭೂ ಪರಿವರ್ತನೆ (Land conversion) ಮಾಡಿಕೊಡಲು ತಹಶೀಲ್ದಾರ್ ಗೀತಾ 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಅದರಂತೆ 20 ಸಾವಿರ ಹಣ ಪಡೆಯುವಾಗ ಲೋಕಾ ಅಧಿಕಾರಿಗಳು ದಾಳಿ (raid) ಮಾಡಿದ್ದಾರೆ.

ಇದನ್ನು ಓದಿ : ಮನೆ ಕೆಲಸದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ; ಪೊಲೀಸ್ ಅಧಿಕಾರಿ Arrest.!

ತುಮಕೂರು ಲೋಕಾಯುಕ್ತ ಡಿವೈಎಸ್ ಪಿ. ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ತಹಶೀಲ್ದಾರ್ ಗೀತಾರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

spot_img
spot_img
spot_img
- Advertisment -spot_img