Sunday, September 8, 2024
spot_img
spot_img
spot_img
spot_img
spot_img
spot_img
spot_img

ವೇಶ್ಯಾವಾಟಿಕೆಗೆ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ ವಕೀಲ ; High court ಹೇಳಿದ್ದೇನು.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ವೇಶ್ಯಾವಾಟಿಕೆ ನಡೆಸುವುದಕ್ಕೆ ರಕ್ಷಣೆ ನೀಡುವಂತೆ ವಕೀಲರೆಂದು ಹೇಳಿಕೊಂಡ ಅರ್ಜಿದಾರರೊಬ್ಬರು ಸಲ್ಲಿಸಿದ್ದ ಅರ್ಜಿಗೆ ಮದ್ರಾಸ್‌ ಹೈಕೋರ್ಟ್‌ ಕೆರಳಿ ಕೆಂಡವಾಗಿದೆ.

ಇದನ್ನು ಓದಿ : Nurse ಜೊತೆ ಹೆಡ್ ಕಾನ್ಸ್‌ಟೇಬಲ್ ಅಕ್ರಮ ಸಂಬಂಧ ; ರೆಡ್ ಹ್ಯಾಂಡ್ಆಗಿ ಹಿಡಿದ ಕಾನ್ಸ್‌ಟೇಬಲ್ ಪತ್ನಿ.!

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ನಡೆಸುವುದಕ್ಕೆ ರಕ್ಷಣೆ ನೀಡುವಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ವಕೀಲರು ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಬಿ ಪುಗಲೇಂಧಿ ಅವರ ಪೀಠವು ವಯಸ್ಕ ಸಮ್ಮತಿಯ ಲೈಂಗಿಕ ಹಕ್ಕುಗಳ ಆಧಾರದ ಮೇಲೆ ತನ್ನ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾನೆ. ಈ ಬಗ್ಗೆ ಅರ್ಜಿದಾರರ ವಿರುದ್ಧ ತೀವ್ರ ಅಸಮ್ಮತಿಯನ್ನು ಹೈಕೋರ್ಟ್‌ ವ್ಯಕ್ತಪಡಿಸಿದೆ

ಅಲ್ಲದೇ ಮದ್ರಾಸ್ ಹೈಕೋರ್ಟ್‌ ಮಧುರೈ ಪೀಠದ ನ್ಯಾಯಮೂರ್ತಿ ಬಿ ಪುಗಳೇಂದಿ ಅವರು, ಅರ್ಜಿದಾರನಿಗೆ ₹ 10,000 ದಂಡ ವಿಧಿಸಿ ಮನವಿ ವಜಾಗೊಳಿಸಿ ವಕೀಲನ ನೋಂದಣಿಪತ್ರದ ನೈಜತೆ ಮತ್ತು ಆತನ ಶಿಕ್ಷಣ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ಎಂದು ತಮಿಳುನಾಡು ಮತ್ತು ಪುದುಚೆರಿ ವಕೀಲರ ಪರಿಷತ್ತಿಗೆ ಇತ್ತೀಚೆಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಇದನ್ನು ಓದಿ : WhatsApp ಬಳಕೆದಾರರಿಗೆ ಗುಡ್‌ ನ್ಯೂಸ್ ; ಇನ್ಮುಂದೆ ಇಂಟರ್ನೆಟ್ ಇಲ್ಲದೆಯೇ ಕಳುಹಿಸಬಹುದು ಫೋಟೋ, ಫೈಲ್.!

ನ್ಯಾಯಾಲಯ ವಕೀಲರ ಪರಿಷತ್ತಿನಲ್ಲಿ ಅಧಿಕೃತ ಕಾಲೇಜುಗಳಿಂದ ಪದವಿ ಪಡೆದವರನ್ನು ಮಾತ್ರ ನೋಂದಣಿ ಮಾಡಿಕೊಳ್ಳಬೇಕು. ಸಮಾಜದಲ್ಲಿ ವಕೀಲರ ಹೆಸರಿಗೆ ಮಸಿ ಬಳಿಯುತ್ತಿರುವುದರ ಬಗ್ಗೆ ವಕೀಲರ ಪರಿಷತ್ತು ಚಿತ್ತ ಹರಿಸಲು ಇದು ಸಕಾಲ ಎಂದು ಸಲಹೆ ನೀಡಿದೆ.

ಸಮವಸ್ತ್ರ ಧರಿಸಿದ್ದ ವಕೀಲರೊಬ್ಬರು ತಾನು ವೇಶ್ಯಾವಾಟಿಕೆ ನಡೆಸುತ್ತಿದ್ದು ಅದಕ್ಕೆ ರಕ್ಷಣೆ ಕೋರುವಂತೆ ಅರ್ಜಿ ಸಲ್ಲಿಸಿರುವುದು ನ್ಯಾಯಾಲಯವನ್ನು ಆಘಾತಕ್ಕೀಡುಮಾಡಿದೆ ಎಂದು ಹೈಕೋರ್ಟ್‌ ತಿಳಿಸಿದೆ.

ಸ್ಥಳೀಯ ಪೊಲೀಸರು ತಮ್ಮ ಟ್ರಸ್ಟ್‌ ಮೇಲೆ ದಾಳಿ ನಡೆಸಿ ಅದರ ಚಟುವಟಿಕೆಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಲೈಂಗಿಕ ಚಟುವಟಿಕೆಗಳನ್ನು ತಮಿಳುನಾಡು ಅನೈತಿಕ ಮಾನವ ಕಳ್ಳಸಾಗಣೆ (ತಡೆ) ಕಾಯಿದೆ ಕಾನೂನುಬಾಹಿರ ಎಂದು ಘೋಷಿಸಿಲ್ಲ ಎಂದಿದ್ದ ಅರ್ಜಿದಾರ ಲೈಂಗಿಕ ಕಾರ್ಯಕರ್ತರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಎಂದು ಬುದ್ಧದೇವ್‌ ಕರ್ಮಾಸ್ಕರ್‌ ಮತ್ತು ಪ. ಬಂಗಾಳ ಸರ್ಕಾರ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಉಲ್ಲೇಖಿಸಿದ್ದ.

ಇದನ್ನು ಓದಿ : ಬೋಟನ್ನೇ ಪಲ್ಟಿ ಮಾಡಿದ ದೈತ್ಯ ತಿಮಿಂಗಿಲ ; ಮೈ ಜುಮ್ಮೆನ್ನಿಸುತ್ತೆ ಈ Video..!

ಅರ್ಜಿದಾರರು ತಮಿಳುನಾಡು ಕಾಯಿದೆ ಮತ್ತು ಸುಪ್ರೀಂ ಕೋರ್ಟ್‌ ತೀರ್ಪನ್ನು ತಪ್ಪಾಗಿ ಗ್ರಹಿಸಿದ್ದಾರೆ. ಈ ಕಾನೂನುಗಳು ಲೈಂಗಿಕ ಕಾರ್ಯಕರ್ತರನ್ನು ರಕ್ಷಿಸುವ ಮತ್ತು ಪುನರ್ಸವಸತಿ ಕಲ್ಪಿಸುವ ಉದ್ದೇಶ ಹೊಂದಿವೆಯೇ ವಿನಾ ವೇಶ್ಯಾಗೃಹ ನಡೆಸುವುದು ಕಾನೂನಬದ್ಧ ಎಂದು ಎಂದಿಗೂ ಹೇಳಿಲ್ಲ ಎಂಬುದಾಗಿ ಹೈಕೋರ್ಟ್‌ ನುಡಿಯಿತು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img