ಜನಸ್ಪಂದನ ನ್ಯೂಸ್, ದಾವಣಗೆರೆ : ಅತಿಥಿ ಉಪನ್ಯಾಸಕರೊಬ್ಬರು ದಾವಣಗೆರೆ ವಿವಿ ಕ್ಯಾಂಪಸ್‌ನಲ್ಲಿ ತಮ್ಮ ಬೆನ್ನ ಮೇಲೆ ವಿದ್ಯಾರ್ಥಿನಿ ಒಬ್ಬರನ್ನು ಹೊತ್ತು ಡ್ಯಾನ್ಸ್ ಮಾಡಿದ ಘಟನೆ ನಡೆದಿದೆ.
ಸದ್ಯ ಘಟನೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಟೀಕೆಗೆ ಗುರಿಯಾಗಿದೆ.
ಇದನ್ನು ಓದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.
ಅತಿಥಿ ಉಪನ್ಯಾಸಕ ಪಂಪಾಪತಿ ವಿದ್ಯಾರ್ಥಿನಿಯನ್ನು ಬೆನ್ನ ಮೇಲೆ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಅತಿಥಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಯನ್ನು ಬೆನ್ನ ಮೇಲೆ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ್ದಾರೆ.
ಇದನ್ನು ಓದಿ : ಕರ್ತವ್ಯದಲ್ಲಿದ್ದ ಮಹಿಳಾ ಡಿಎಸ್ಪಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ; ವಿಡಿಯೋ Viral.!
ಅಷ್ಟೇ ಅಲ್ಲದೆ, ಕೆಲವರು ಅಂಗಿ ಬಿಚ್ಚಿಕೊಂಡು ಬರೀ ಮೈಯಲ್ಲಿ ಡ್ಯಾನ್ಸ್ ಮಾಡಿ ಅಶಿಸ್ತು ತೋರಿರುವ ಘಟನೆಯೂ ನಡೆದಿದೆ ಎಂದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ.