Friday, June 14, 2024
spot_img
spot_img
spot_img
spot_img
spot_img
spot_img

Lokasabha election : NDAಗೆ ಕಡಿಮೆ ಸ್ಥಾನ, ಹೃದಯಾಘಾತದಿಂದ BJP ಅಭಿಮಾನಿ ಸಾವು.!

spot_img

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ (NDA) ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಫಲಿತಾಂಶ (Election Results 2024) ಬಂದದ್ದನ್ನು ನೋಡಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಮೃತಪಟ್ಟ ಘಟನೆ ನಡೆದಿದೆ

ಇದನ್ನು ಓದಿ : ಆಟವಾಡುತ್ತಿದ್ದ ಮಗುವನ್ನು ಎತ್ತಿಕೊಂಡು ಹೋಗಲು ಪ್ರಯತ್ನಿಸಿದ ಮಂಗ ; ಆಶ್ಚರ್ಯಕರ ವಿಡಿಯೋ Viral.!

ಶಿವಪ್ರಕಾಶ್ ಹಿರೇಮಠ ಮೃತಪಟ್ಟಿದ್ದು, ಅವರು ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದರು (fan).

ಹುಬ್ಬಳ್ಳಿಯ (Hubli) ಲಿಂಗರಾಜ ನಗರದಲ್ಲಿ ಈ ಘಟನೆ ನಡೆದಿದೆ.

ಮನೆಯ ಸೋಫಾದಲ್ಲಿ ಕುಳಿತು ಟಿವಿಯಲ್ಲಿ ಫಲಿತಾಂಶ ನೋಡುವಾಗ ಶಿವಪ್ರಕಾಶ್ ಕುಸಿದು ಬಿದ್ದಿದ್ದಾರೆ. ಎನ್‌ಡಿಎ 300ರಷ್ಟು ಗಡಿ ದಾಟಲಿಲ್ಲ ಎಂದು ಸುದ್ದಿ ತಿಳಿದ ಶಿವಪ್ರಕಾಶ್‌ ಆಘಾತಕ್ಕೆ (shock) ಒಳಗಾಗಿದ್ದಾರೆ.

ಇದನ್ನು ಓದಿ : Air show ವೇಳೆ ಮುಖಾಮುಖಿ ಡಿಕ್ಕಿಯಾದ ವಿಮಾನ : ಓರ್ವ ಪೈಲಟ್ ಸಾವು ; ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

spot_img
spot_img
- Advertisment -spot_img