ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಣಯ ಜೋಡಿಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ. ನಡು ರಸ್ತೆಯಲ್ಲಿಯೇ ಮೈಮರೆತು ಎಲ್ಲೆಂದರಲ್ಲಿ ಸ್ವಲ್ಪ ನಾಚಿಕೆ, ಮುಜುಗರ ಇಲ್ಲದೇ ಜೋಡಿಗಳು ಕಿಸ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.
ಲಜ್ಜೆಯಿಲ್ಲದೇ ಈ ಪ್ರೇಮಿಗಳು ತೋರುವ ಹುಚ್ಚಾಟಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಲಿಸುತ್ತಿರುವ ರೈಲಿನಲ್ಲಿ ರೊಮ್ಯಾನ್ಸ್ ಮಾಡಿದ, ಕಾಲೇಜ್ ಕ್ಯಾಂಪಸ್‌ನಲ್ಲಿ ಮೈ ಮರೆತು ಅಸಭ್ಯವಾಗಿ ವರ್ತಿಸಿದ ಕೆಲವಷ್ಟು ವಿಡಿಯೋಗಳು ಈ ಹಿಂದೆಯೂ ವೈರಲ್ ಆಗಿದ್ದವು.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಸದ್ಯ ಇಂತಹದ್ದೇ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಇಲ್ಲಿ ಜೋಡಿಯ ಈ ಅತಿರೇಕದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪ್ರೇಮಿಗಳು ಪಾರ್ಕ್ ನಲ್ಲಿ ಪೊದೆಯಲ್ಲಿ ರೋಮ್ಯಾನ್ಸ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾರೆ.
ಪಾರ್ಕ್ ಒಂದರಲ್ಲಿ ಪ್ರೇಮಿಗಳಿಬ್ಬರು ಪೊದೆಯಲ್ಲಿ ಅಡಗಿ ಕುಳಿತು ರೊಮ್ಯಾನ್ಸ್ ಮಾಡುವಾಗ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ಇವರು ಸರಸ ಸಲ್ಲಾಪದಲ್ಲಿ ತೊಡಗಿರುವುದನ್ನು ಯಾರೋ ವಿಡಿಯೋ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪ್ರೇಮಿಗಳು ಯಾಕೆ ವಿಡಿಯೋ ಮಾಡ್ತಿದ್ದೀರಾ ಎಂದು ಆ ವ್ಯಕ್ತಿಯನ್ನು ದಬಾಯಿಸಿದ್ದಾರೆ.
ಠಾಕೂರ್ ಮಾನ್ ಸಿಂಗ್ (thakur_maan_singh_20k) ಎಂಬವರು ಈ ಕುರಿತ ಪೋಸ್ಟ್ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಸಹೋದರ, ನೀವು ಯಾವ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೀರಿ ???’ ಎಂಬ ತಮಾಷೆಯ ಶೀರ್ಷಿಕೆ ನೀಡಿದ್ದಾರೆ.
ಇದನ್ನು ಓದಿ : ಮಗನನ್ನು ಕೊಲ್ಲಲು ಯತ್ನಿಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ ; ವಿಡಿಯೋ Viral.!
ಆಗಸ್ಟ್ 8 ರಂದು ಹಂಚಿಕೊಳ್ಳಲಾದ ಈ ವಿಡಿಯೋ 6.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ.
ಕೆಲವರು ಈ ರೀತಿ ಬೇರೆಯವರ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕುವುದು ತುಂಬಾ ತಪ್ಪು ಎಂದು ಕಮೆಂಟ್ ಮಾಡಿದರೆ, ಇನ್ನೂ ಕೆಲವರು ವಿಡಿಯೋ ಮಾಡಿದ್ದು ತಪ್ಪು, ಯಾರೇ ಆಗಿರಲಿ ಇನ್ನೊಬ್ಬರ ಗೌಪ್ಯತೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಕಮೆಂಟ್ ಮಾಡಿದ್ದಾರೆ.
View this post on Instagram