Saturday, November 9, 2024
spot_imgspot_img
spot_img
spot_img
spot_img
spot_img
spot_img

BSNLನಿಂದ ಪ್ರತಿಸ್ಪರ್ಧಿಗಳಿಗೆ ಮಾಸ್ಟರ್ ಸ್ಟ್ರೋಕ್; ಸಿಮ್, ನೆಟ್‌ವರ್ಕ್ ಇಲ್ಲದೆ ಮಾಡಬಹುದು ಕಾಲ್.!

WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಬಿಎಸ್‌ಎನ್‌ಎಲ್ ತನ್ನ ಪ್ರತಿಸ್ಪರ್ಧಿಗಳಿಗೆ ಒಂದಲ್ಲಾ ಒಂದು ಶಾಕ್ ನೀಡುತ್ತಿದೆ. ಕಡಿಮೆ ರೀಚಾರ್ಜ್ ಪ್ಲಾನ್, ಡೇಟಾ ಆಫರ್ ಸೇರಿದಂತೆ ಹಲವು ಆಫರ್ ನಡುವೆ ಇದೀಗ ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿ ಮಾಡಿದೆ.

ಯಾವುದೇ ನೆಟ್‌ವರ್ಕ್, ಸಿಮ್ ಇಲ್ಲದೆ ಕರೆ ಮಾಡುವ ಸೌಲಭ್ಯವನ್ನು ಬಿಎಸ್‌ಎನ್‌ಎಲ್ ಇದೀಗ ಡೈರೆಕ್ಟ್ 2 ಡಿವೈಸ್ (D2D) ತಂತ್ರಜ್ಞಾನದ ಮೂಲಕ ನೀಡುತ್ತಿದೆ. ಇದು ಗ್ಲೋಬಲ್ ಸ್ಯಾಟಲೈಟ್ ಕಮ್ಯೂನಿಕೇಶನ್ ವಯಾಸ್ಯಾಟ್ ಜೊತೆಗಿನ ಸಹಭಾಗಿತ್ವದಲ್ಲಿ ಬಿಎಸ್‌ಎನ್‌ಎಲ್ ಹೊಸ ಕ್ರಾಂತಿ ಮಾಡುತ್ತಿದೆ.

ಇದನ್ನು ಓದಿ : ಪಾನಿಪುರಿಯನ್ನು ಬಾಯಿ ಚಪ್ಪರಿಸಿ ತಿನ್ನುವುದಕ್ಕಿಂತ ಮುಂಚೆ ಈ ವಿಡಿಯೋವನ್ನೊಮ್ಮೆ ನೋಡಿ.

ಇದರ ಪ್ರಯೋಗ ಯಶಸ್ವಿಯಾಗಿದ್ದು, ಇದು ಎಲ್ಲ ಸ್ಥಳದಲ್ಲೂ ಅತ್ಯುತ್ತಮ ಸಂಪರ್ಕವನ್ನು ಒದಗಿಸಬಲ್ಲದು. ಶೀಘ್ರದಲ್ಲೇ ಈ ಸೇವೆ ಭಾರತೀಯರಿಗೆ ಲಭ್ಯವಾಗಲಿದೆ.

ಕರೆ ಮಾಡಲು ಯಾವುದೇ ಸಿಮ್ ಬೇಕಿಲ್ಲ, ಹಳ್ಳಿಯಾಗಲಿ, ಪುಟ್ಟ ಗ್ರಾಮವಾಗಲಿ ನೆಟ್‌ವರ್ಕ್ ಇರಬೇಕಿಲ್ಲ. ಎಲ್ಲವೂ ಸ್ಯಾಟಲೈಟ್ ಮೂಲಕವೇ ಸಂವಹನ ನಡೆಯಲಿದೆ.

ಕಾರು ಬಳಕೆದಾರರು ಕೂಡ ಕಾರಿನಲ್ಲಿರುವ ಸ್ಮಾರ್ಟ್ ಗ್ಯಾಜೆಟ್ ಮೂಲಕ ಸುಲಭವಾಗಿ ಕರೆ ಮಾಡಬಹುದು. ಆ್ಯಂಡ್ರಾಯ್ಡ್, ಐಒಎಸ್ ಮಾತ್ರವಲ್ಲ, ಸ್ಮಾರ್ಟ್‌ವಾಚ್ ಸೇರಿದಂತೆ ಸ್ಮಾರ್ಟ್ ಗ್ಯಾಜೆಟ್ ಇದ್ದರೆ ಸಾಕು, ಕಾಲ್ ಮಾಡಲು ಸಾಧ್ಯವಿದೆ.

ಪ್ರಮುಖವಾಗಿ ಈ ಸೇವೆ ನೆಟ್‌ವರ್ಕ್ ಇಲ್ಲದ, ರಿಮೂಟ್ ವಲಯಗಳಲ್ಲಿ ಮೊದಲ ಹಂತದಲ್ಲಿ ಬಳಕೆಯಾಗಲಿದೆ. ಕರೆ ಮಾಡಲು ಮೊಬೈಲ್ ಫೋನ್ ಬೇಕೆಂದಿಲ್ಲ. ಸ್ಮಾರ್ಟ್ ಗ್ಯಾಜೆಟ್ ಇದ್ದರೆ ಸಾಕು, ನೇರವಾಗಿ ಸ್ಯಾಟಲೈಟ್ ಮೂಲಕ ಸಂಪರ್ಕ ಸಾಧ್ಯವಿದೆ.

ಇದನ್ನು ಓದಿ : ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ಮೂಲಕ ಭಾರತದಲ್ಲಿ ರಿಮೂಟ್ ಏರಿಯಾದಲ್ಲೂ ಕರೆ, ಜಗತ್ತಿನೊಂದಿಗೆ ಸಂಪರ್ಕದಲ್ಲಿರಲು ಸಾಧ್ಯವಾಗಲಿದೆ. ಟುವೇ ಮೇಸೇಜಿಂಗ್, ಎಸ್‌ಒಎಸ್ ಮೇಸೇಜಿಂಗ್ ಸೇರಿದಂತೆ ಎರಡು ಮಾದಿರಯಲ್ಲಿ ಪ್ರಯೋಗ ನಡೆಸಲಾಗಿದೆ. ಸರಿಸುಮಾರು 36,000 ಕಿಲೋಮೀಟರ್ ದೂರದಲ್ಲಿರುವ ಭೂಸ್ಥಿರ ಎಲ್ ಬ್ಯಾಂಡ್ ಉಪಗ್ರಹಗಳಿಗೆ ಸಂದೇಶ ಕಳುಹಿಸಿದ ಪ್ರಯೋಗ ಯಶಸ್ವಿಯಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img