ಜನಸ್ಪಂದನ ನ್ಯೂಸ್, ಬೆಂಗಳೂರು : ಹವಾಮಾನ ಇಲಾಖೆಯು (Meteorological Department) ಮೇ 22 ರವರೆಗೂ ವರುಣನ ಆರ್ಭಟ ರಾಜ್ಯದಲ್ಲಿ ಮುಂದುವರಿಯಲಿದೆ. ಅಲ್ಲದೇ ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆ ಮೇ 18, 19 ಮತ್ತು 20ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (orange alert) ಅನ್ನು ಐಎಂಡಿ ಘೋಷಿಸಿದೆ.
ಇದನ್ನು ಓದಿ : ನೆಲ ಒರೆಸುವಾಗ ಹೀಗೆ ಮಾಡಿ ನೋಡಿ ಮನೆಯೊಳಗೆ mosquito ಬರೋದೇ ಇಲ್ಲ.!
ಸುಮಾರು 115.5 ಮಿಮೀನಿಂದ 204.5 ಮಿಮೀವರೆಗೆ ಶನಿವಾರ, ಭಾನುವಾರ ಹಾಗೂ ಸೋಮವಾರದಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು (heavy rain) ಎಂದು ಮುನ್ಸೂಚನೆ ನೀಡಲಾಗಿದೆ.
ಈ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ನೀಡಿದ್ದು, ಬೆಂಗಳೂರಿನ ಸುತ್ತಮುತ್ತ ಜಿಲ್ಲೆಗಳು ಹಾಗೂ ಶಿವಮೊಗ್ಗ ಸುತ್ತಮುತ್ತಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ನಿರೀಕ್ಷೆ (expectation) ಇದೆ ಎಂದು ವರದಿಯಿಂದ ತಿಳಿದು ಬಂದಿದೆ.
ಮೇ 17 ರಂದು ಯಾದಗಿರಿ, ಕೊಪ್ಪಳ, ಕಲಬುರಗಿ, ರಾಯಚೂರು ಹಾಗೂ ಗದಗ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ : Belagavi : ಸಹೋದರಿಯೊಂದಿಗೆ ಲವ್ವಿಡವ್ವಿಯಲ್ಲಿ ತೊಡಗಿದ್ದವನ ಬರ್ಬರ ಹತ್ಯೆ.!
ಅಲ್ಲದೇ ಹಾಸನ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Average rainfall) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು, ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಕುಸಿದಿದೆ.
ಮೇ 18, 19 ಮತ್ತು 20 ರಂದು ಮೈಸೂರು, ಚಾಮರಾಜನಗರ, ಬೆಂಗಳೂರು, ಕೊಡಗು, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಇದನ್ನು ಓದಿ : Murder case : ಕರ್ತವ್ಯ ಲೋಪ ಹಿನ್ನೆಲೆ ಇನ್ಸ್‌ಪೆಕ್ಟರ್, ಮಹಿಳಾ ಸಿಬ್ಬಂದಿ ಸಸ್ಪೆಂಡ್.!
ಈ ಮೂರು ದಿನ ಕರ್ನಾಟಕದ ಬಹುತೇಕ ಕಡೆ ಮಳೆಯಾಗಲಿದೆ. ಈ ಮೂರು ದಿನವೇ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ (For the southern interior districts) ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೇ 21 ಮತ್ತು 22ರಂದು ರಾಜ್ಯದಾದ್ಯಂತ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ. (ಏಜೇನ್ಸಿಸ್)