Wednesday, May 22, 2024
spot_img
spot_img
spot_img
spot_img
spot_img
spot_img

ರಾಜ್ಯದ 23 ಜಿಲ್ಲೆಗಳಲ್ಲಿ yellow ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯ ಹವಾಮಾನ ಇಲಾಖೆಯು (State Meteorological Department) ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಸಂಭವಿಸುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದೆ.

ದಕ್ಷಿಣ ಕೇರಳ ಮತ್ತು ನೆರೆಯ ಕರ್ನಾಟಕವು ಚಂಡಮಾರುತದ (of the storm) ತೀವ್ರತೆಯನ್ನು ಅನುಭವಿಸುವ ನಿರೀಕ್ಷೆಯಿದೆ.

ಇದನ್ನು ಓದಿ : ರೈಲು ಚಾಲಕನ ಬರುವಿಕೆಗಾಗಿ ಕಾಯುತ್ತಿರುವ ಬೀದಿ ನಾಯಿ ; ಯಾಕಂತೀರಾ ಈ Video ನೋಡಿ.!

ಮೇ 11ರ ಶನಿವಾರ ಗಂಟೆಗೆ 50 ಕಿ.ಮೀ ವೇಗದಲ್ಲಿ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ (forecast) ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇತರ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಗಾಳಿಯ ವೇಗವು (Wind speed) ಗಂಟೆಗೆ 40-50 ಕಿ.ಮೀ. ಬೀಸಲಿದೆ.

ಮೇ 12ರ ಭಾನುವಾರ ಬೀದರ್, ವಿಜಯಪುರ, ಕಲಬುರಗಿ ಹಾಗೂ ಇತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ

ಇನ್ನೂ ಮೇ 13ರ ಸೋಮವಾರ ಚಿಕ್ಕಮಗಳೂರು, ಮೈಸೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : Double murder : ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದ ಯುವಕ ಹಾಗೂ ಆತನ ಸಹೋದರನ ಬರ್ಬರ ಹತ್ಯೆಗೈದ ತಂದೆ.!

ಇದಲ್ಲದೆ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇತರ ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಮಳೆಯಾಗುವ (Scattered thunderstorms) ಸಾಧ್ಯತೆಯಿದೆ.

ಅಲ್ಲದೇ ಮೇ 14 ರ ಮಂಗಳವಾರ, ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ

 

spot_img
spot_img
spot_img
- Advertisment -spot_img