ಜನಸ್ಪಂದನ ನ್ಯೂಸ್, ಬೆಂಗಳೂರು : ಹವಾಮಾನ ಇಲಾಖೆಯು ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದಿನಿಂದ 1 ವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನು ಓದಿ : South Western Railway ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!
ರಾಜ್ಯದ ಚಿತ್ರದುರ್ಗ, ಹಾವೇರಿ, ತುಮಕೂರು, ಬಳ್ಳಾರಿ, ದಾವಣಗೆರೆ ಗದಗ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಂಡ್ಯ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು, ಕೊಡಗು ಹಾಗೂ ಕೋಲಾರ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದೆ.
ಇದನ್ನು ಓದಿ : Health : ಈ ಎಲೆಯ ನೆನೆಸಿದ ನೀರು ಕುಡಿಯುವುದರಿಂದ ಬೆಣ್ಣೆಯಂತೆ ಕರಗುವುದು ಹೊಟ್ಟೆಯ ಕೊಬ್ಬು.!
ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.