ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಬಡ್ಡಿ ಸಾಲಕ್ಕೆ ಸಂಬಂಧಿಸಿ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಹುಬ್ಬಳ್ಳಿಯ ಕರ್ಕಿ ಬಸವೇಶ್ವರ ನಗರದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಈ ಪ್ರಕರಣದಿಂದ ಮೀಟರ್ ಬಡ್ಡಿಗೆ ಶಾಲಾ ಮಕ್ಕಳಿಗೂ ಸಾಲ ಕೊಡುತ್ತಿದ್ದಾರಾ ಅಥವಾ ಮೀಟರ್ ಬಡ್ಡಿ ವ್ಯವಹಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರಾ ಎಂಬುದು ಆಘಾತಕಾರಿ ವಿಚಾರ ಬೆಳಕಿಗೆ ಬರಬೇಕಿದೆ.
10ನೇ ತರಗತಿ ವಿದ್ಯಾರ್ಥಿಯೊಬ್ಬ ₹10 ಸಾವಿರ ಸಾಲವನ್ನು ವಾರದ ಬಡ್ಡಿ ಲೆಕ್ಕದಲ್ಲಿ ಪಡೆದಿದ್ದನಂತೆ. ಪ್ರತಿ ವಾರ ₹1 ಸಾವಿರ ಬಡ್ಡಿ ಕೊಡುತ್ತಿದ್ದನು ಎನ್ನಲಾಗಿದೆ. ಆದರೆ ಎರಡ್ಮೂರು ವಾರದಿಂದ ಈತ ಬಡ್ಡಿ ಕೊಟ್ಟಿರಲಿಲ್ಲ.
ಇದನ್ನು ಓದಿ : ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಅಸಿಸ್ಟಂಟ್ ಸೆಕ್ಯೂರಿಟಿ Officer ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಹೀಗಾಗಿ ಈತನನ್ನು 9ನೇ ತರಗತಿ ವಿದ್ಯಾರ್ಥಿ ಸೇರಿ 6 ಮಂದಿ ಕರೆದುಕೊಂಡು ಬಂದು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ್ದರು. ಅಲ್ಲದೆ, ಚಾಕು ಸೇರಿ ಮತ್ತಿತರ ಮಾರಕಾಸ್ತ್ರಗಳಿಂದ ಬೆದರಿಸಿದ್ದರು.
ಇದು ಸಾಲ ಪಡೆದಿದ್ದ ವಿದ್ಯಾರ್ಥಿ ಪಾಲಕರಿಗೆ ಗೊತ್ತಾಗಿ ಶೀಘ್ರದಲ್ಲೇ ಹಣ ಕೊಡುವುದಾಗಿ ಭರವಸೆ ನೀಡಿ ಮಗನನ್ನು ಬಿಡಿಸಿಕೊಂಡು ಬಂದಿದ್ದರು ಎಂದು ತಿಳಿದು ಬಂದಿದೆ.
ಇದನ್ನು ಓದಿ : ಮಗನನ್ನು ಕೊಲ್ಲಲು ಯತ್ನಿಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ ; ವಿಡಿಯೋ Viral.!
ಆದರೆ ಸ್ವಲ್ಪ ಹೊತ್ತಿನಲ್ಲೇ ಮತ್ತೆ ಆ ಅಪ್ರಾಪ್ತರು, ಸಾಲ ಪಡೆದಿದ್ದ 10ನೇ ತರಗತಿ ಬಾಲಕನನ್ನು ಕರೆಸಿಕೊಂಡು ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಆತ 9ನೇ ತರಗತಿ ಬಾಲಕನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಈತನನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಚಾಕುವಿನಿಂದ ಇರಿದ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಮ್ಮ ಮಗನನ್ನು ಕಿಡ್ನಾಪ್ ಮಾಡಿ ಅಕ್ರಮವಾಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ಮೀಟರ್ ಬಡ್ಡಿಯಂತೆ ಸಾಲ ಕೊಟ್ಟು ಹಣ, ಮೊಬೈಲ್ ಕಸಿದುಕೊಂಡಿದ್ದಾರೆ ಎಂದು 10ನೇ ತರಗತಿಯ ಬಾಲಕನ ಪಾಲಕರು ಪ್ರಕರಣ ದಾಖಲಿಸಿದ್ದಾರೆ. ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ : ಪಾರ್ಕ್‌ನಲ್ಲಿ ಕುಳಿತಿದ್ದ ಯುವಕನ ಮೇಲೆ ಬೆತ್ತಲೆಯಾಗಿ ಬಂದ ಯುವತಿಯಿಂದ ಲೈಂಗಿಕ ದೌರ್ಜನ್ಯ ; ವಿಡಿಯೋ Viral.!
ಮೀಟರ್ ಬಡ್ಡಿ ಹಣಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆಯೇ? ಅಥವಾ 9ನೇ ತರಗತಿ ವಿದ್ಯಾರ್ಥಿ ತನ್ನದೇ ಹಣ ಸಾಲ ಕೊಟ್ಟಿದ್ದಾನೆಯೇ? 9ನೇ ತರಗತಿ ವಿದ್ಯಾರ್ಥಿ ಸೇರಿ ಆರು ಮಂದಿ ಅಪ್ರಾಪ್ತರನ್ನು ಬಿಟ್ಟು ವಸೂಲಿಗೆ ಇಳಿದಿದ್ದು ಯಾರು? 10ನೇ ತರಗತಿ ವಿದ್ಯಾರ್ಥಿಗೆ ₹10 ಸಾವಿರ ಸಾಲವನ್ನು ಮೀಟರ್ ಬಡ್ಡಿ ಲೆಕ್ಕದಲ್ಲಿ ಕೊಟ್ಟಿದ್ದು ಯಾರು? ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಹೊರಬೀಳಬೇಕಿದೆ.
ಬೆಂಡಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.