Tuesday, October 22, 2024
spot_img
spot_img
spot_img
spot_img
spot_img
spot_img
spot_img

ಲಕ್ಷಾಂತರ ರೂ. ವಂಚನೆ ಆರೋಪ; ಹೆಡ್ ಕಾನ್ಸ್​ಟೇಬಲ್ Suspend.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ನಗರ ಸಶಸ್ತ್ರ ಮೀಸಲು ಪ್ರಧಾನ ಕಚೇರಿ (CAR) ಹೆಡ್​​ಕಾನ್ಸ್ಟೇಬಲ್ ವಿರುದ್ಧ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ.

ಹೆಡ್​​ಕಾನ್ಸ್ಟೇಬಲ್​ ಆಗಿರುವ ಪ್ರಶಾಂತ್ ಕುಮಾರ್ ಅವರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.

ಇದನ್ನು ಓದಿ : ಪಾನಿಪುರಿಯನ್ನು ಬಾಯಿ ಚಪ್ಪರಿಸಿ ತಿನ್ನುವುದಕ್ಕಿಂತ ಮುಂಚೆ ಈ ವಿಡಿಯೋವನ್ನೊಮ್ಮೆ ನೋಡಿ.

ಮಹಾಲಕ್ಷ್ಮೀ ಲೇಔಟ್ ನಿವಾಸಿ ಮಹಿಳೆ ದೂರು ನೀಡಿದ್ದಾರೆ. ದೂರು ಆಧರಿಸಿ ನಂದಿನಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

2011ರಲ್ಲಿ ದೂರುದಾರೆ ಮಹಿಳೆ ಅವರಿಗೆ ಪ್ರಶಾಂತ್ ಕುಮಾರ್ ಪರಿಚಯವಾಗಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸಿ ಎಂದು ಮಹಿಳೆ ಪ್ರಶಾಂತ್ ಕುಮಾರ್ ಅವರಿಗೆ ಹೇಳಿದ್ದಾರೆ. ಅದಕ್ಕೆ ಪ್ರಶಾಂತ್​ ಕುಮಾರ್​ ನನಗೆ ಹಲವು ಸರ್ಕಾರಿ ಅಧಿಕಾರಿಗಳು ಪರಿಚಯ ಇದ್ದಾರೆ. ನಿಮ್ಮ ಇಬ್ಬರು ಮಕ್ಕಳಿಗೆ ಕೆಲಸ ಕೊಡಿಸುತ್ತೇನೆ ಎಂದಿದ್ದರು.

ಕೆಲ ದಿನಗಳ ಬಳಿಕ ಪೇದೆ ಪ್ರಶಾಂತ್​ ಕುಮಾರ್​, ನಿಮ್ಮ ಇಬ್ಬರು ಮಕ್ಕಳಿಗೆ ಮೂರು ತಿಂಗಳಲ್ಲಿ ಎಫ್​ಡಿಎ, ಎಸ್​ಡಿಎ ಶ್ರೇಣಿಯ ಕೆಲಸ ಕೊಡಿಸುವೆ. ಇದಕ್ಕಾಗಿ 25 ಲಕ್ಷ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.

ಅಲ್ಲದೇ ಪೇದೆ ಪ್ರಶಾಂತ್ ಕುಮಾರ್​, ಮಂಜುನಾಥ್ ಪ್ರಸಾದ್ ಎಂಬುವರನ್ನು ತನ್ನ ಪಿಎ ಎಂದು ಭಾಗ್ಯಮ್ಮ ಅವರಿಗೆ ಪರಿಚಯ ಮಾಡಿಸಿದ್ದಾನೆ. ನಂತರ ಆರೋಪಿಗಳು ಭಾಗ್ಯಮ್ಮ ಅವರಿಂದ ಒಟ್ಟು 47 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಜೊತೆಗೆ 857 ಗ್ರಾಂ. ಚಿನ್ನಾಭರಣವನ್ನೂ ಪಡೆದಿದ್ದಾರೆ.

ಇದನ್ನು ಓದಿ : ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹೀಗಾಗಿ ಭಾಗ್ಯಮ್ಮ ಆರೋಪಿಗಳ ವಿರುದ್ಧ ನಂದಿನಿ ಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಜುನಾಥ್​ ಪ್ರಸಾದ್​ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಶಾಂತ್​ ಕುಮಾರ್​ ಅವರನ್ನು ಅಮಾನತು ಮಾಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img