ಜನಸ್ಪಂದನ ನ್ಯೂಸ್, ಹಾಸನ : ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ತೆರಳುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ (Minister of Food and Civil Supplies) ಕೆ. ಹೆಚ್. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.
ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ (Hassan) ಹೋಗುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ (A car from the rear collided) ಎಂದು ತಿಳಿದು ಬಂದಿದೆ.
ಇದನ್ನು ಓದಿ : 2 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವ ಇರುವವರೆಗೆ ಕಠಿಣ ಶಿಕ್ಷೆ.!
ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ (K. H. Muniyappa) ಅವರು ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹಿಂದಿನ ಸುದ್ದಿ : ಪ್ರಿಯಕರನ ಜೊತೆ ಸೇರಿ ನದಿಯಲ್ಲಿ ಮುಳುಗಿಸಿ ಪತಿಯ ಕೊಲೆ ; ವರ್ಷದ ಬಳಿಕ ಮೂವರ ಬಂಧನ.!
ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ 11 ತಿಂಗಳ ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು (Harugeri police station) ಕೊನೆಗೂ ಯಶಸ್ವಿಯಾಗಿದ್ದಾರೆ.
ಇಂದು (ದಿ.04) ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ ಗುಳೇದ ಅವರು ಪ್ರಕರಣದ ಕುರಿತು ಮಾಹಿತಿ ನೀಡಿದರು.
ಇದನ್ನು ಓದಿ : ಪ್ರಿಯಕರನ ಜೊತೆ ಸೇರಿ ನದಿಯಲ್ಲಿ ಮುಳುಗಿಸಿ ಪತಿಯ ಕೊಲೆ ; ವರ್ಷದ ಬಳಿಕ ಮೂವರ ಬಂಧನ.!
ಕೃಷ್ಣಾ ನದಿಯಲ್ಲಿ 27.12.2023 ರಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಮಧ್ಯೆ ರಾಯಬಾಗ ತಾಲೂಕಿನ ಇಟ್ನಾಳ ಗ್ರಾಮದ ಯುವಕನೋರ್ವ ಕಾಣೆಯಾಗಿದ್ದನು. ಆದರೆ ಆತನ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ಪೊಲೀಸರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿದರು. ಕೊನೆಗೂ ಅದು ಇಟನಾಳ ಗ್ರಾಮದ ಯುವಕನ ಶವ ಎನ್ನುವುದು ಗೊತ್ತಾಯಿತು. ಯುವಕನ ಪತ್ನಿ, ಆಕೆಯ ಪ್ರಿಯಕರ, ಹಾಗೂ ಇನ್ನೊಬ್ಬ ಸೇರಿ ಕೃಷ್ಣಾ ನದಿಯಲ್ಲಿ ಯುವಕನನ್ನು ಮುಳುಗಿಸಿ ಕೊಲೆ ಗೈದಿದ್ದರು ಎನ್ನುವುದು ಪೊಲೀಸ್ ತನಿಖೆಯಲ್ಲಿ ಸಾಬೀತುಗೊಂಡಿದೆ.
ಇದನ್ನು ಓದಿ : Health : ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?
ಒಂದೂವರೆ ವರ್ಷದ ಹಿಂದೆ ಯುವಕನ ಪತ್ನಿ ಕಾಣೆಯಾದ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವಕನ ಪತ್ನಿ ಓರ್ವನೊಂದಿಗೆ ಓಡಿ ಹೋಗಿದ್ದು, ಯುವಕನಿಗೆ ಗೊತ್ತಾಗಿದೆ.
ಕೆಲದಿನಗಳ ನಂತರ ಪತ್ನಿ ಮನೆಗೆ ವಾಪಸ್ ಬಂದಿದ್ದಳು. ದಂಪತಿಗಳ ನಡುವೆ ಓಡಿ ಹೋಗಿದ್ದ ವಿಚಾರಕ್ಕೆ ದಿನವೂ ಗಲಾಟೆ ಯಾಗುತ್ತಿತ್ತು. ತನ್ನ ಪತ್ನಿಯ ಸಹ ಸಂಗ ಬಿಡುವಂತೆ ಪತ್ನಿಯ ಪ್ರಿಯಕರನಿಗೆ, ಯುವಕ ಎಚ್ಚರಿಕೆ ಕೊಟ್ಟಿದ್ದ.
ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಕೊನೆಗೂ ಪತಿಗೆಯೇ ಗತಿ ಕಾಣಿಸಲು ಮುಂದಾದ ಪತ್ನಿ, ತನ್ನ ಪ್ರಿಯಕರ ಹಾಗು ಇನ್ನೊಬ್ಬನ ನೆರವಿನೊಂದಿಗೆ ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಲ್ಲಪ್ಪನನ್ನು ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು.